ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿದೇಶೀ ಕ್ರಿಕೆಟ್ ಲೀಗ್ ಬಿಗ್ ಬಾಶ್ ನಲ್ಲಿ ಆಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು. ಇದೀಗ ಅವರ ಕಡೆಯಿಂದ ಮತ್ತೊಂದು ಸುದ್ದಿ ಬಂದಿದೆ. ಯುವಿ ಕಳೆದ ವರ್ಷವಷ್ಟೇ ಅಂತಾರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಇದೀಗ ದೇಶೀಯ ಟಿ20 ಕ್ರಿಕೆಟ್ ನಲ್ಲಿ ಆಡಲು ಆಸಕ್ತಿ ವಹಿಸಿರುವ ಯುವಿ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುವ ಮನಸ್ಸು ಮಾಡಿದ್ದಾರೆ. ಇತ್ತೀಚೆಗಷ್ಟೇ