ಬೆಂಗಳೂರು (ಜು.15): ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ಸಮಾವೇಶದ ಬಗ್ಗೆ ಸಂಪುಟದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಈ ಕುರಿತು ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ ಇದೆ. ಅಲ್ಲದೇ ರಾಜ್ಯದಲ್ಲಿ ಆಕ್ಸಿಜನ್ ಘಟಕ ಆರಂಭಿಸಲು ವಿಶೇಷ ಪ್ರೋತ್ಸಾಹ ನೀಡುವುದು. ರಾಜ್ಯದಲ್ಲಿ 2021-22 ನೇ ಸಾಲಿನ ಬೆಳೆ ಸಮೀಕ್ಷೆಯ ಯೋಜನೆ ಜಾರಿ ಕುರಿತು ಚರ್ಚೆ ನಡೆಯಲಿದೆ.