ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಬೇಷರತ್ ಕ್ಷಮಾಪಣೆ ಯಾಚಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಒಂದು ವೇಳೆ ಬೇಷರತ್ ಕ್ಷಮಾಪಣೆ ಕೇಳದೇ ಇದ್ದರೆ ನಿಂದನೆ ಪ್ರಕರಣದ ಕುರಿತ ವಿಚಾರಣೆಯನ್ನು ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಲೋಧಾ ಸಮಿತಿ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ವಿಚಾರದಲ್ಲಿ ವಿಳಂಬ ಧೋರಣೆ ತೋರಿದ ಪ್ರಕರಣಕ್ಕೆ ಅಂತ್ಯ ಹಾಡಬೇಕಾದರೆ ಇದೇ ಜುಲೈ 14ರಂದು ಸ್ವತಃ ಸುಪ್ರೀಂಕೋರ್ಟ್ ಗೆ ಹಾಜರಾಗಿ ಖುದ್ದು ಕ್ಷಮೆಯಾಚಿಸುವಂತೆ ಸೂಚಿಸಿದೆ. ಅಲ್ಲದೇ ಕ್ಷಮಾಪಣೆ ಅಫಿಡೆವಿಟ್