-ಸಮರ್ಥ ಶೆಟ್ಟಿ, ಯಡ್ತಾಡಿ ಅದೊಂದು ಬಾಲ್ಯವಿತ್ತು ಅದಕ್ಕೆ ಯಾವ ಪರಿಧಿಯು ಇರಲಿಲ್ಲ. ಯಾವ ಗೊಡವೆಯು ಇಲ್ಲದ ಸ್ವತಂತ್ರ ಪಕ್ಷಿಗಳು ನಾವಾಗಿದ್ದೇವು. ಒಮ್ಮೆ ನಾವು ಕುಳಿತು ನೆನಪುಗಳನ್ನು ಮೆಲುಕು ಹಾಕಲು ಹೊರಟರೆ ಕಾಡುವುದೇ ಮತ್ತೆಂದು ಮರಳಿ ಬಾರದ ಬಾಲ್ಯದ ನೆನಪು. ಆಗಸ್ಟ್ ಹದಿನೈದು ನಮ್ಮ ರಾಷ್ಟ್ರಹಬ್ಬ...ಆ ದಿನದ ಸಡಗರ, ಸಂಭ್ರಮ, ಪೂರ್ವ ತಯಾರಿ ಪದಗಳಿಗೆ ನಿಲುಕದ್ದು. ಅಂದು ನಮಗೆ ಸ್ವಾತಂತ್ರ್ಯದ ಅರ್ಥ ಗೊತ್ತಿರಲಿಲ್ಲ. ಆದರೆ ಎಂದು ಆಚರಣೆ ತಪ್ಪಿದವರಲ್ಲ.