ವಾಷಿಂಗ್ಟನ್: ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ರನ್ನು ಹಿಂದಿಕ್ಕಿರುವ ಇ-ಕಾಮರ್ಸ್ ದಿಗ್ಗಜ ಅಮೆಜಾನ್ ಸಿಇಓ ಜೆಫ್ ಬೆಜೋಸ್ ವಿಶ್ವದ ಅತೀ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಗುರುವಾರ ಮಾರುಕಟ್ಟೆ ಆರಂಭದಲ್ಲಿ ಅಮೆಜಾನ್ ಷೇರು ಬೆಲೆಗಳು ಶೇ.1.6ರಷ್ಟು ಏರಿಕೆಯಾಗಿದ್ದು ಜೆಫ್ ಬೆಜೋಸ್ ಗೆ ಹೆಚ್ಚುವರಿಯಾಗಿ 1.4 ಶತಕೋಟಿ ಡಾಲರ್ ಗಳ ಅದೃಷ್ಟ ಒಲಿಯಿತು. ಇದರಿಂದ ಅವರ ಸಂಪತ್ತು 90 ಶತಕೋಟಿ