ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯ ವಿವಾದದಂತೆ ಮಹದಾಯಿ ಯೋಜನೆ ಅನುಷ್ಠಾನದ ವಿಷಯವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೂರೂ ರಾಜ್ಯದ ಮುಖ್ಯಮಂತ್ರಿಗಳು ನ್ಯಾಯಾಧಿಕರಣದ ಹೊರಗೆ ಸಮಸ್ಯೆ ಪರಿಹರಿಸಿಕೊಳ್ಳಲು ನ. 21 ರಂದು ಮಹಾರಾಷ್ಟ್ರದಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆಗೆ ಪೂರ್ವಭಾವಿಯೆಂಬಂತೆ ರಾಜ್ಯ ಸರಕಾರ ಇಂದು ಸಾಯಂಕಾಲ ಆರು ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ರಾಜಕೀಯ ನಾಯಕರ ಸಮ್ಮುಖದಲ್ಲಿ ಮಹದಾಯಿ ಯೋಜನೆ ಅನುಷ್ಠಾನದ ಕುರಿತಾಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲಿದೆ. ಮಹರಾಷ್ಟ್ರದಲ್ಲಿ