ಬೆಂಗಳೂರು: ಹೆಬ್ಬಾಳದ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ವ್ಯಕ್ತಿಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಆತನಿಗೆ 25ರಿಂದ 30 ವರ್ಷ ಇರಬಹುದು. ಶನಿವಾರ ರಾತ್ರಿ 9.30ರ ಸುಮಾರಿಗೆ ಜೋರಾಗಿ ಮಳೆ ಬರುತ್ತಿದ್ದಾಗ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ನಾಲ್ವರು ಕುಳಿತಿದ್ದರು. ಈ ವೇಳೆ ನಿಲ್ದಾಣದ ಸೀಟಿನ ಹಿಂಭಾಗದಲ್ಲಿ ಅಳವಡಿಸಿದ್ದ ಜಾಹೀರಾತು ಫಲಕದ ಬೋರ್ಡ್ನಿಂದ ಸಣ್ಣದಾಗಿ ವಿದ್ಯುತ್ ಶಾಕ್ ಹೊಡೆದ ಅನುಭವ ಆಗಿದೆ.