ಬೆಂಗಳೂರು : ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದಿದ್ದಾರೆ. ಕೊವಿಡ್-19 ನಿಯಂತ್ರಣ ಕ್ರಮಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಕಂದಾಯ ಸಚಿವರು, ಆರೋಗ್ಯ ಸಚಿವರು, ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ