ನೌಕರಿಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ನಗರದ ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ದಾದಿಯರು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ ಅವರು ಪ್ರತಿಕ್ರಿಯಿಸಿದ್ದು, ಸಂಘದ ಒಳರಾಜಕೀಯಕ್ಕಾಗಿ ಆಸ್ಪತ್ರೆಯ ದಾದಿಯರು ಹಾಗೂ ವೈದ್ಯರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೂ ಕೂಡ ಉತ್ತಮ ರೀತಿಯಲ್ಲಿಯೇ ವೇತನ ನೀಡಲಾಗುತ್ತಿದೆ. ಆದರೆ ಆಸ್ಪತ್ರೆಯ ವೈದ್ಯರು ಹಾಗೂ ದಾದಿಯರು ವಿನಾಃ ಕಾರಣ ಪ್ರತಿಭಟನೆ