ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪುಷ್ಕರ್ ಅವರು ಆಯ್ಕೆಯಾದ 24 ಗಂಟೆಯೊಳಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯ ಪಾಲ ಬೇಬಿ ರಾಣಿ ಮೌರ್ಯ ಅವರು ಪುಷ್ಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕುಮೌನ್ ಭಾಗದಿಂದ (ಖಾತಿಮಾ ಕ್ಷೇತ್ರ) ಎರಡು ಬಾರಿ ಶಾಸಕಾಗಿರುವ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶನಿವಾರ ಬಿಜೆಪಿ ಮುಖ್ಯ ಕಚೇರಿಯಲ್ಲಿ