ಡಿ.ಕೆ ರವಿ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖಾ ವರದಿಯ ಪ್ರತಿ ನೀಡಿದರೆ ಮರು ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇನ್ನಾದರೂ ವರದಿ ನೀಡಬೇಕು ಎಂದು ಡಿ.ಕೆ.ರವಿ ತಾಯಿ ಗೌರಮ್ಮ ಅಳಲು ತೋಡಿಕೊಂಡಿದ್ದಾರೆ.ಕುಟುಂಬದ ಪರಿಸ್ಥಿತಿಯ ಅರಿವಿದ್ದ ರವಿ ಸಾಯುವವನಲ್ಲ. ಆದ್ದರಿಂದ ಕೊಲೆ ಮಾಡಿರುವ ಸಾಧ್ಯತೆ ಇದೆ. ಈ ಸಾವಿನ ಪ್ರಕರಣವನ್ನು ಸಿಬಿಐ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ವರದಿ ನೀಡುತ್ತಿಲ್ಲ. ಅಧಿಕಾರಿಗಳು