ಬೆಂಗಳೂರು(ಜು.19): ನಿಗದಿಯಂತೆ ರಾಜ್ಯಾದ್ಯಂತ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ಮೊದಲ ದಿನ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಹೀಗಾಗಿ ವಿದ್ಯಾರ್ಥಿಗಳೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಆರಾಮಾಗಿ ಪರೀಕ್ಷೆ ಬರೆಯಿರಿ. ಆಲ್ ದಿ ಬೆಸ್ಟ್. ಈ ಬಾರಿ ರಾಜ್ಯದ 14,929 ಪ್ರೌಢ ಶಾಲೆಗಳಿಂದ 7.83 ಲಕ್ಷ ಹೊಸ ವಿದ್ಯಾರ್ಥಿಗಳು ಸೇರಿ ಒಟ್ಟಾರೆ 8,76,508 ಮಂದಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು,