ಸಾರ್ವಜನಿಕರ ಹಿತದೃಷ್ಟಿ ಹಾಗೂ ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ ಮತ್ತು ಇತರೆ ಬಡಾವಣೆಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಉಕ್ಕಿನ ಸೇತುವೆಯನ್ನು ನಿರ್ಮಿಸುವ ಯೋಜನೆಗೆ ಸರ್ಕಾರ ಬದ್ಧವಾಗಿದೆ. ಸಧ್ಯ ಈ ವಿಚಾರ ರಾಷ್ಟ್ರೀಯ ಹಸಿರು ನ್ಯಾಯಪೀಠದ ಮುಂದೆ ಇದೆ. ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಅಂತಿಮ ತೀರ್ಮಾನದ ಬಳಿಕ ಮುಂದಿನ ಕ್ರಮ ವಹಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನಾ ಸಚಿವ ಕೆ.ಜೆ. ಜಾರ್ಜ್ ಹೇಳಿದರು.