ಗುಂಡ್ಲುಪೇಟೆ: ಕೇರಳದಲ್ಲಿ ಟೊಮ್ಯಾಟೋ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ರಾಜ್ಯದ ಗಡಿ ಮೂಲೆ-ಮೂಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಕೇರಳದಿಂದ ರಾಜ್ಯಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಿದ ಹಿನ್ನೆಲೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ ಖುದ್ದು ಮೂಲೆಹೊಳೆಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಕೇರಳದಿಂದ ಬರುವ ಪ್ರಯಾಣಿಕರಲ್ಲಿ 5 ವರ್ಷದೊಳಗಿನ ಮಕ್ಕಳಲ್ಲಿ ಟೊಮೆಟೋ ಜ್ವರದ ಗುಣ ಲಕ್ಷಣ ಕಂಡು ಬಂದಲ್ಲಿ ತಪಾಸಣೆಗೆ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ. 5