ಬೆಂಗಳೂರು: ಗೊಂದಲದ ಗೂಡಾಗಿರುವ ರಾಜ್ಯ ಬಿಜೆಪಿಗೆ ಹೊಸ ಆಡಿಯೋ ಬಾಂಬ್ ತಲ್ಲಣಗೊಳಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಧ್ವನಿ ಇರುವ ಈ ಆಡಿಯೋ ನಿಜವೇ ಆಗಿದ್ದಲ್ಲಿ ಬಿಎಸ್ ಯಡಿಯೂರಪ್ಪ ಅವರ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿರುವುದು ಬಹಳ ಸ್ಪಷ್ಟವಾಗಿ ತೋರುತ್ತದೆ. ಈ ಆಡಿಯೋದಲ್ಲಿ ಕಟೀಲ್ ಅವರು ತಮ್ಮ ಮಾತೃ ಭಾಷೆ ತುಳುವಿನಲ್ಲಿ ಅನಾಮಿಕ ವ್ಯಕ್ತಿಯೊಬ್ಬರೊಂದಿಗೆ ಮಾತನಾಡಿದ್ದು, ಅದರಲ್ಲಿ ಅವರು ಕರ್ನಾಟಕ ಸರ್ಕಾರದಲ್ಲಿ ಮಹತ್ತರ ಬದಲಾವಣೆಯಾಗುವ ಸುಳಿವು ನೀಡಿದ್ದಾರೆ. ಯಡಿಯೂರಪ್ಪ