ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಕಚೇರಿಗೆ ಭೇಟಿ ನೀಡಿದ ರಾಹುಲ್ ಗಾಂಧಿ

ಅಮೇಥಿ, ಶುಕ್ರವಾರ, 24 ಜನವರಿ 2014 (14:26 IST)

PTI
ಸ್ವಕ್ಷೇತ್ರವಾದ ಅಮೇಥಿಗೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಕಚೇರಿಯ ಎದುರುಗಡೆಯಿರುವ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಕೈಕುಲುಕಿ ಅಚ್ಚರಿ ಮೂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಿಂತಿದ್ದ ನೂರಾರು ಆಮ್ ಆದ್ಮಿ ಕಾರ್ಯಕರ್ತರನ್ನು ಭೇಟಿ ಮಾಡಿದ ವಿಚಿತ್ರ ಘಟನೆ ವರದಿಯಾಗಿದೆ.

ರಾಹುಲ್ ಗಾಂಧಿಯವರ ವರ್ತನೆ ಉಪಸ್ಥಿತರಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಚ್ಚರಿ ಮೂಡಿಸಿತಾದರೂ ನಂತರ ಆಮ್ ಆದ್ಮಿ ಕಾರ್ಯಕರ್ತರನ್ನು ಭೇಟಿಯಾಗಿ ಕೈಕುಲುಕಿದ ಬಗ್ಗೆ ರಾಹುಲ್‌ಗೆ ಅರಿವಾದ ನಂತರ ಮುಗುಳ್ನಗೆ ಬೀರಿ ಹೊರಟುಹೋದರೆಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ರಾಜಕೀಯ ಬೇರೆ ಮನುಷತ್ವ ಬೇರೆಯಾಗಿದೆ. ಆದ್ದರಿಂದ ಪರಸ್ಪರ ಕುಶಲೋಪರಿಯಲ್ಲಿ ಯಾವುದೇ ತಪ್ಪಿಲ್ಲ ಎಂದು ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :