ಆಮ್ ಆದ್ಮಿ ಪಕ್ಷಕ್ಕೆ ನೀಡಿದ 45 ಕೋಟಿ ರೂಪಾಯಿ ದೇಣಿಗೆ ತಿರಸ್ಕರಿಸಿದ ಕೇಜ್ರಿವಾಲ್

ನವದೆಹಲಿ, ಶುಕ್ರವಾರ, 21 ಮಾರ್ಚ್ 2014 (19:22 IST)

PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಲು ಅರ್ಹ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಬಗ್ಗೆ ಕಟ್ಟು ನಿಟ್ಟಿನ ನಿಲುವು ಅನುಸರಿಸುತ್ತಿದೆ.

ಆಮ್ ಆದ್ಮಿ ಪಕ್ಷದಿಂದ ಸಂಸತ್ತಿಗೆ ಸ್ಪರ್ಧಿಸುವ ಆಕಾಂಕ್ಷೆ ಹೊಂದಿರುವ ಅಭ್ಯರ್ಥಿಯೊಬ್ಬರು ಪಕ್ಷಕ್ಕೆ 45 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದಾರೆ. ಆದರೆ, ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದೇಣಿಗೆ ಹಣವನ್ನು ನಿರಾಕರಿಸಿದ್ದಾರೆ.

ಅಪರಿಚಿತ ಅಭ್ಯರ್ಥಿಯೊಬ್ಬ ಆಮ್ ಆದ್ಮಿ ಪಕ್ಷದ ಕಚೇರಿಗೆ 45 ಕೋಟಿ ರೂಪಾಯಿಗಳ ಚೆಕ್ ಕಳುಹಿಸಿ ನನಗೆ ಅಗತ್ಯವಾದ ಕ್ಷೇತ್ರದಲ್ಲಿ ಲೋಕಸಭೆ ಟಿಕೆಟ್ ನೀಡಬೇಕು ಮತ್ತು ನನ್ನ ಹೆಸರನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸಬಾರದು ಎನ್ನುವ ಮನವಿ ಮಾಡಿದ್ದರು.

ಆಮ್ ಆದ್ಮಿ ಪಕ್ಷ ರಾಜಕೀಯ ಪಕ್ಷವಾಗಿ ಅಸ್ತಿತ್ವಕ್ಕೆ ಬಂದ ನಂತರ ಇಲ್ಲಿಯವರೆಗೆ 35 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ಸ್ಲೀಕರಿಸಿದೆ.

ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ಮಾತನಾಡಿ, ಪಕ್ಷ ಹಣದ ರಾಜಕೀಯ ಅಥವಾ ತೋಳಲ್ಬದ ರಾಜಕೀಯ ಮಾಡಲು ಕ್ಷೇತ್ರವನ್ನು ಪ್ರವೇಶಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶ ಮೂಲದ ಉದ್ಯಮಿಯೊಬ್ಬರು ರಾಜ್ಯದಲ್ಲಿ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದಲ್ಲಿ 2 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಪಕ್ಷಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಆಮ್ ಆದ್ಮಿ ಪಕ್ಷ ಅದನ್ನು ತಳ್ಳಿಹಾಕಿತ್ತು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...