ಉಪಪ್ರಧಾನಿ ರೇಸ್‌ನಲ್ಲಿ ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್

ಭೋಪಾಲ್, ಶುಕ್ರವಾರ, 28 ಮಾರ್ಚ್ 2014 (13:25 IST)

PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆಯೋ ಇಲ್ಲವೋ ಆದರೆ, ಪಕ್ಷದ ಮುಖಂಡರಲ್ಲಿ ಉಪಪ್ರಧಾನಿ ಸೇರಿದಂತೆ ಹಲವಾರು ಹುದ್ದೆಗಳಿಗೆ ಭಾರಿ ಪೈಪೋಟಿ ಆರಂಭವಾಗಿದೆ.

ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ತಾವು ಕೂಡಾ ಉಪಪ್ರದಾನಿ ಆಕಾಂಕ್ಷಿ ಎಂದು ಹಲವಾರು ಬಾರಿ ಪರೋಕ್ಷವಾಗಿ ಹೇಳಿಕೆ ನೀಡಿದ್ದಾರೆ. ಇದೀಗ ಸುಷ್ಮಾ ಸ್ವರಾಜ್ ಕೂಡಾ ಉಪಪ್ರಧಾನಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಬಿಜೆಪಿ ಅನಾಮಧೇಯ ಮೂಲಗಳು ತಿಳಿಸಿವೆ.

ಬಿಜೆಪಿಯೇನಾದರೂ ಅಧಿಕಾರಕ್ಕೆ ಬಂದರೆ ಪ್ರಧಾನಿ ಯಾರಾಗುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸತ್ಯ. ಆದರೆ, ಉಪಪ್ರಧಾನಿ ಹುದ್ದೆಗೆ ಸಂಬಂಧಿಸಿ ತಿಕ್ಕಾಟ ನಡೆಯುವ ಸೂಚನೆಗಳು ಈಗಲೇ ಸಿಗಲಾರಂಭಿಸಿವೆ.

ಇತ್ತೀಚೆಗಷ್ಟೇ ಬಿಜೆಪಿ ಮಿತ್ರ ಪಕ್ಷವಾದ ಅಕಾಲಿದಳ ಅರುಣ್ ಜೇಟ್ಲಿ ಉಪಪ್ರಧಾನಿಯಾಗಲಿದ್ದಾರೆ ಎಂದಿತ್ತು. ಈಗ ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾಸ್ವರಾಜ್ ಉಪಪ್ರಧಾನಿಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಮಧ್ಯಪ್ರದೇಶದ ಸಚಿವ ಸುರೇಂದ್ರ ಪತ್ವಾ. ಪತ್ವಾ ಅವರು ಸುಷ್ಮಾ ಉಪಸ್ಥಿತಿಯಲ್ಲೇ ಈ ಹೇಳಿಕೆ ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...