ಉ. ಪ್ರದೇಶದಲ್ಲಿ ಅಜಮ್ ಖಾನ್ ಮತ್ತು ಅಮಿತ್ ಶಾ ಪ್ರಚಾರಕ್ಕೆ ಚುನಾವಣಾ ಆಯೋಗ ನಿಷೇಧ

ಉತ್ತರ ಪ್ರದೇಶ್, ಶನಿವಾರ, 12 ಏಪ್ರಿಲ್ 2014 (14:51 IST)

ಶುಕ್ರವಾರ ನರೇಂದ್ರ ಮೋದಿ ಅವರ ಆಪ್ತ ಸಹಾಯಕ ಅಮಿತ್ ಶಾ ಮತ್ತು ಉತ್ತರ ಪ್ರದೇಶದ ವಿವಾದಾತ್ಮಕ ಸಮಾಜವಾದಿ ನಾಯಕ ಅಜಮ್ ಖಾನ್‌ ಚುನಾವಣಾ ನಡೆಸುವುದನ್ನು ನಿಷೇಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

PTI

ಇನ್ನು ಇವರಿಬ್ಬರು ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಸಭೆ, ಸಮಾವೇಶ ಅಥವಾ ರಸ್ತೆ ಪ್ರದರ್ಶನಗಳನ್ನು ನಡೆಸುವ ಹಾಗಿಲ್ಲ.

ಅಲ್ಲದೇ ಅವರಿಬ್ಬರ ವಿರುದ್ಧ ಕ್ರಿಮಿನಲ್ ವ್ಯಾಜ್ಯವನ್ನು ಪ್ರಾರಂಭಿಸುವಂತೆ ಆಯೋಗ ಅಧಿಕಾರಿಗಳಿಗೆ ತಿಳಿಸಿದೆ. ಮುಖ್ಯ ಚುನಾವಣಾ ಆಯುಕ್ತ ವಿ ಸಂಪತ್ ಮತ್ತು ಇತರ ಚುನಾವಣಾ ಆಯುಕ್ತರಾದ ಎಚ್ಎಸ್ ಬ್ರಹ್ಮ, ಎಸ್‌ಎನ್‌ಎ ಜೈದಿ ಭಾಗವಹಿಸಿದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು.

ಕಾನೂನು-ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಯಲ್ಲಿ ಯಾವುದೇ ಪರಿಣಾಮ ಉಂಟಾಗದಂತೆ ತಡೆಯುವ ಸಲುವಾಗಿ ಖಾನ್ ಮತ್ತು ಶಾ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಉತ್ತರಪ್ರದೇಶದ ಮುಖ್ಯ ಕಾರ್ಯದರ್ಶಿಗೆ ಆಯೋಗ ನಿರ್ದೇಶನ ನೀಡಿದೆ.

ಈ ಎರಡೂ ರಾಜಕಾರಣಿಗಳು ಉತ್ತರಪ್ರದೇಶದಲ್ಲಿ ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ವಿವಾದಾತ್ಮಕ ಟೀಕೆಗಳನ್ನು ಮಾಡಿದ್ದರು. ಅಮಿತ್ ಶಾ ಮತ್ತು ಅಜಮ್ ಖಾನ್ ವಿರುದ್ಧ 3 ಪುಟಗಳಷ್ಟು ದೀರ್ಘವಾದ ಆದೇಶವನ್ನು ಆಯೋಗ ಜಾರಿ ಮಾಡಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ಆಯೋಗದ ಕ್ಷಮೆ ಕೋರಲಾರೆ, ಆದ್ರೆ ಅಮಿತ್ ಶಾ ನಿಷೇಧ ತೆರುವುಗೊಳಿಸಿದ್ದು ಯಾಕೆ?: ಅಜಂ ಖಾನ್

ದ್ವೇಷದ ಭಾಷಣ ಕುರಿತಂತೆ ಚುನಾವಣೆ ಆಯೋಗದ ಕ್ಷಮೆಯಾಚಿಸಲು ನಿರಾಕರಿಸಿರುವ ಯುಪಿ ಸಚಿವ ಅಜಂ ಖಾನ್, ನನ್ನ ...

ಮುರಳಿ ಮನೋಹರ್ ಜೋಷಿ ಕಾಲಿಗೆ ಬಿದ್ದು ನಮಸ್ಕರಿಸಿದ ನರೇಂದ್ರ ಮೋದಿ

ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಚಾರ ವೇದಿಕೆಯಲ್ಲಿಯೇ, ಪಕ್ಷದ ಹಿರಿಯ ನಾಯಕ ಮುರಳಿ ...