ಕಳೆದ ಚುನಾವಣೆಯಂತೆ ಈ ಬಾರಿಯೂ ಬಿಜೆಪಿ ಬಲೂನ್ ಒಡೆಯಲಿದೆ: ರಾಹುಲ್ ಗಾಂಧಿ

ನವದೆಹಲಿ, ಬುಧವಾರ, 26 ಮಾರ್ಚ್ 2014 (18:35 IST)

PR
ಕಳೆದ 2004ರಲ್ಲಿ ಭಾರತ ಶೈನಿಂಗ್ ಎಂದು ಘೋಷಿಸಿ ಚುನಾವಣೆ ಎದುರಿಸಿ ಸೋಲನ್ನು ಕಂಡಿದ್ದ ಬಿಜೆಪಿ, 2014ರ ಚುನಾವಣೆಯಲ್ಲಿ ಮೋದಿ ಅಲೆಯ ಬಲೂನ್ ಒಡೆಯಲಿದೆ. ಮೋದಿ ಪ್ರದಾನಿಯಾಗುವುದು ದೇಶಕ್ಕೆ ಅಪಾಯಕಾರಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನರೇಂದ್ರ ಮೋದಿಯವರ ಸಿದ್ದಾಂತ ಭಾರತ ವಿರೋಧಿಯಾಗಿದೆ. ಇಂತಹ ಸಿದ್ದಾಂತವನ್ನು ಸೋಲಿಸುವುದೇ ಕಾಂಗ್ರೆಸ್ ಪಕ್ಷದ ಗುರಿಯಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಚುನಾವಣಾ ಪೂರ್ವ ಸಮೀಕ್ಷೆಗಳು ಯಪಿಎ ಮೈತ್ರಿಕೂಟ ಚುನಾವಣೆಯಲ್ಲಿ ಸೋಲನುಭವಿಸಲಿದೆ ಎಂದು ಪ್ರಕಟಿಸುತ್ತಿವೆ. ಆದರೆ, ಚುನಾವಣಾ ಫಲಿತಾಂಶ ಪ್ರತಿಯೊಬ್ಬರನ್ನು ದಂಗುಬಡಿಸಲಿದೆ ಎಂದು ಹೇಳಿದ್ದಾರೆ.

ಭಾರತ ಶೈನಿಂಗ್ ಬಲೂನ್ ಒಡೆದಂತೆ ಬಿಜೆಪಿಯ ಮೋದಿ ಬಲೂನ್ ಕೂಡಾ ಒಡೆಯಲಿದೆ. ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದ 80 ಕ್ಷೇತ್ರಗಳು ನಿರ್ಣಾಯಕ ಪಾತ್ರವಹಿಸಲಿವೆ ಎಂದು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...