ಕಾಂಗ್ರೆಸ್ ನಾಯಕರಿಂದ ಮಂಗಳ ಗ್ರಹದಿಂದ ಬಂದವರಂತೆ ವರ್ತನೆ: ಮೋದಿ ಲೇವಡಿ

ಮಾಂಡ್ಲಾ, ಶನಿವಾರ, 29 ಮಾರ್ಚ್ 2014 (15:58 IST)

PTI
ದೇಶದ ಜನತೆಗೆ ಉತ್ತಮ ಜೀವನ ಕಲ್ಪಿಸಲು ಕಾಂಗ್ರೆಸ್ ಮುಖಂಡರು ಮೀನಾಮೇಷ ಎಣಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ತಮಗೆ ಭೂಮಿಗೂ ಯಾವುದೇ ಸಂಬಂಧವಿಲ್ಲ ಮಂಗಳಗ್ರಹದಿಂದ ಬಂದವರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮೋಸದ ಪ್ರಣಾಳಿಕೆಯಾಗಿದೆ. 2014ರ ಲೋಕಸಭೆ ಚುನಾವಣೆ ಹಣದುಬ್ಬರ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದಾಗಿದೆ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡಿ ಎಂದು ಕರೆ ನೀಡಿದ್ದಾರೆ.

ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ದೇಶದ ಜನತೆ ಭ್ರಷ್ಟಾಚಾರ ಮತ್ತು ಹಗಲು ದರೋಡೆಯ ವಿರುದ್ಧ ಸಮರ ಸಾರಿದ್ದಾರೆ. ಇದೊಂದು ಸಂತಸದ ಬೆಳವಣಿಗೆಯಾಗಿದೆ ಎಂದರು.

ಕೇಂದ್ರದಲ್ಲಿ ಸರಕಾರ ಅಧಿಕಾರಕ್ಕೆ ಬಂದ 100 ದಿನಗಳೊಳಗಾಗಿ ಹಣದುಬ್ಬರವನ್ನು ಇಳಿಸುವುದಾಗಿ ಜನತೆಗೆ ಭರವಸೆ ನೀಡಿತ್ತು. ಆದರೆ, ಹಣದುಬ್ಬರ ಇಳಿಕೆಯಾಗಿದೆಯೇ ಎಂದು ಮೋದಿ ನೆರೆದ ಜನಸ್ತೋಮವನ್ನು ಪ್ರಶ್ನಿಸಿದರು.

ಪ್ರಜಾಪ್ರಭುತ್ವ ವಿರೋಧಿ ಮತ್ತು ಜನತೆಯ ವಿರೋಧಿಯಾಗಿರುವ ಕಾಂಗ್ರೆಸ್ ಪಕ್ಷಕ್ಕೆ ದೇಶವನ್ನು ಆಳುವ ಯಾವುದೇ ಹಕ್ಕಿಲ್ಲ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಗುಡುಗಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...