ಕಾಂಗ್ರೆಸ್ ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಹಣದುಬ್ಬರವನ್ನು ನೀಡಿದೆ: ಗಡ್ಕರಿ

ಬೊಕಾರೋ, ಶನಿವಾರ, 19 ಏಪ್ರಿಲ್ 2014 (10:36 IST)

'ಕಾಂಗ್ರೆಸ್ ದೇಶಕ್ಕೆ ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಹಣದುಬ್ಬರವನ್ನು ನೀಡಿದೆ' ಎಂದು ಆರೋಪಿಸಿರುವ ಬಿಜೆಪಿಯ ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ 'ಎನ್‌ಡಿಎ ಅಧಿಕಾರಕ್ಕೆ ಬಂದರೆ ಈ ಸಮಸ್ಯೆಗಳಿಂದ ದೇಶವನ್ನು ಮುಕ್ತಗೊಳಿಸಲಿದೆ ಮತ್ತು ಮೊದಲ ಆರು ತಿಂಗಳಲ್ಲಿ 25 ಪ್ರತಿಶತ ಬೆಲೆಗಳನ್ನು ತಗ್ಗಿಸಲಿದೆ' ಎಂದು ಹೇಳಿದ್ದಾರೆ.

PTI

ಧನಬಾದ್ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ನಿರತರಾಗಿದ್ದ ಅವರು "ಕಾಂಗ್ರೆಸ್ ದೇಶಕ್ಕೆ ಸಮಸ್ಯೆಯಾಗಿದೆ. ಅದು ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಹಣದುಬ್ಬರವನ್ನು ಹುಟ್ಟು ಹಾಕಿತು. ಬಿಜೆಪಿ ಅಧಿಕಾರಕ್ಕೆ ಬಂದರೆ ಆರು ತಿಂಗಳೊಳಗೆ ಹಣದುಬ್ಬರವನ್ನು ತಗ್ಗಿಸಲಿದೆ" ಎಂದು ಅವರು ಭರವಸೆ ನೀಡಿದರು.

"ಕಾಂಗ್ರೆಸ್ ಉತ್ತಮ ಆಡಳಿತ ನಡೆಸಲು ವಿಫಲವಾಗಿದೆ. ಸ್ವಾತಂತ್ರ್ಯ ಬಂದಾಗಿನಿಂದ ತಪ್ಪು ನೀತಿಗಳನ್ನು ಜಾರಿಗೆ ತರುವ ಮೂಲಕ ದೇಶಕ್ಕೆ ಸಂಕಷ್ಟವನ್ನು ತಂದಿದೆ" ಎಂದು ಅವರು ಆರೋಪಿಸಿದ್ದಾರೆ.

"ಹಣದುಬ್ಬರ, ಭ್ರಷ್ಟಾಚಾರ ಮತ್ತು ದುರಾಡಳಿತ ಕಾಂಗ್ರೆಸ್ ಕಾರ್ಯಾಲಯದ ಹೆಗ್ಗುರುತು. ಕಾಂಗ್ರೆಸ್ 'ಬಡತನವನ್ನು ತೊಲಗಿಸಿ' ಎಂದು ಘೋಷಣೆ ನೀಡಿತ್ತು. ಆದರೆ ಜನರು ಮೊದಲಿಗಿಂತ ಹೆಚ್ಚು ಬಡತನದಲ್ಲಿ ಮುಳುಗಿ ಹೋಗಿದ್ದಾರೆ" ಎಂದು ಬಿಜೆಪಿ ನಾಯಕ ವಿರೋಧ ಪಕ್ಷಕ್ಕೆ ಚಾಟಿ ಏಟು ಬೀಸಿದ್ದಾರೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಮೇಲೆ 'ಕೋಮುವಾದದ ರಾಜಕೀಯ' ನಡೆಸುತ್ತಿರುವ ಆರೋಪ ಹೊರಿಸಿದ ಅವರು ಈ ಚುನಾವಣೆ ರಾಷ್ಟ್ರದ ಭವಿಷ್ಯವನ್ನು ಬದಲಾಯಿಸಲು ಸಿಕ್ಕಿರುವ ಒಂದು ಅವಕಾಶ. ನೀವು ದೇಶವನ್ನು ರಕ್ಷಿಸಲು ಬಯಸುವುದಾದರೆ ನರೇಂದ್ರ ಮೋದಿಯನ್ನು ಪ್ರಧಾನಿಯಾಗಿ ಆಯ್ಕೆ ಮಾಡಿ" ಎಂದು ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಪಿ.ಎಮ್. ಸಿಂಹ್‌ರಿಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದ ಅವರು ಇಷ್ಟು ವರ್ಷಗಳಲ್ಲಿ ಕಾಂಗ್ರೆಸ್ ಅಭಿವೃದ್ಧಿ ಸಾಧಿಸಲು ವಿಫಲವಾಗಿದೆ. ಆದರೆ ನಾವದನ್ನು 5 ವರ್ಷಗಳಲ್ಲಿ ಮಾಡಿ ತೋರಿಸುತ್ತೇವೆ ಎಂದು ವಾಗ್ದಾನ ಮಾಡಿದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...