ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ರಾಹುಲ್ ಗಾಂಧಿ ಗುಡುಗು

ನವದೆಹಲಿ, ಶುಕ್ರವಾರ, 21 ಮಾರ್ಚ್ 2014 (19:15 IST)

PTI
ಕಳೆದ 10 ವರ್ಷಗಳಲ್ಲಿ ಪ್ರಮುಖ ಖಾತೆಗಳನ್ನು ಅನುಭವಿಸಿದ್ದ ಕಾಂಗ್ರೆಸ್ ಮುಖಂಡರು ಚುನಾವಣೆಗೆ ನಿಲ್ಲಲು ಹಿಂದೇಟು ಹಾಕುತ್ತಿರುವುದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಕೆರಳಿಸಿದೆ.

ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ಮುಖಂಡರು ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡುತ್ತಿರುವಂತೆ ಕೆಂಡಾಮಂಡಲವಾದ ರಾಹುಲ್ ಗಾಂಧಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೌದು, ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವ ಮನೋಭಾವ ರಾಹುಲ್ ಗಾಂಧಿ ಪಕ್ಷದ ಹಿರಿಯ ನಾಯಕರ ಮನೋಭಾವ ಅವರನ್ನು ಕೆರಳಿಸಿದೆ. ಯುಪಿಎ 1 ಮತ್ತು ಯುಪಿಎ 2 ರಲ್ಲಿ ಪ್ರಭಾವದ ಖಾತೆಗಳನ್ನೇ ಹೊಂದಿ, ಇದೀಗ ಆಡಳಿತ ವಿರೋಧಿ ಅಲೆ ಇದೆ ಎಂಬ ಸಮೀಕ್ಷೆಗಳ ವರದಿಗಳನ್ನು ನಂಬಿ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಅಂಶವೂ ಅವರು ಕೆರಳಲು ಕಾರಣ ಎನ್ನಲಾಗಿದೆ. ನಾಯಕರ ಇಂಥ ಮನೋಭಾವ ಜನರಿಗೆ ತಪ್ಪು ಸಂದೇಶ ಕೊಡುತ್ತೆ ಎಂಬುದು ರಾಹುಲ್ ಸಿಟ್ಟಿಗೆ ಕಾರಣ.

ರಾಹುಲ್ ಗಾಂಧಿ ಅವರ ತೋಳೇರಿಸುವ ಈ ಸಿಟ್ಟೇ ಸ್ಪರ್ಧಿಸಲ್ಲ ಎಂದು ಹೇಳುತ್ತಿದ್ದ ಮನೀಷ್ ತಿವಾರಿ, ಶಕೀಲ್ ಅಹ್ಮದ್‌ರಂಥ ಹಿರಿಯ ನಾಯಕರು ಹೆದರಿ ಈಗ ಸ್ಪರ್ಧಿಸಲು ಕಾರಣ ಎಂದು ಮೂಲಗಳು ಹೇಳುತ್ತಿವೆ. ಇದಷ್ಟೇ ಅಲ್ಲ, ಸ್ಪರ್ಧಿಸುವುದಿಲ್ಲ ಎಂದ ಸಾಲು ಸಾಲು ನಾಯಕರೀಗ ರಾಹುಲ್ ಸಿಟ್ಟಿಗೆ ಕರಗಲೇಬೇಕಾದಂಥ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೆ ಶಿವಗಂಗೆಯಿಂದ ಸ್ಪರ್ಧಿಸಲ್ಲ ಎಂದು ಹೇಳುತ್ತಿರುವ ಚಿದಂಬರಂ ಮೇಲೂ ರಾಹುಲ್ ಸಿಟ್ಟು ಕೆಲಸ ಮಾಡಿದೆ. ಅವರೂ ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಿದೆ.

ಹಿರಿಯರ ಸಿಟ್ಯಾಕೆ?

ಮೂಲಗಳು ಹೇಳುವಂತೆ, ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಾಹುಲ್ ಗಾಂಧಿ ನಾಯಕತ್ವದಡಿಯಲ್ಲಿ ಕೆಲಸ ಮಾಡುವುದು ಸಾಧ್ಯವಾಗುತ್ತಿಲ್ಲವಂತೆ. ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿಯೂ ರಾಹುಲ್ ಹಿರಿಯ ನಾಯಕರನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂಬ ಕಾರಣವೂ ಈ ನಿರ್ಧಾರದಲ್ಲಿದೆ ಎಂದು ಎಐಸಿಸಿ ನಾಯಕರೊಬ್ಬರು ಹೇಳುತ್ತಾರೆ. ಹೀಗಾಗಿ ಅವರು ಚುನಾವಣಾ ರಾಜಕೀಯವನ್ನೇ ಬಿಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...