ಕುಮಾರ್ ವಿಶ್ವಾಸ್ ಮೇಲೆ ಎಫ್‌ಐಆರ್ ದಾಖಲು

ಅಮೇಥಿ, ಶನಿವಾರ, 19 ಏಪ್ರಿಲ್ 2014 (12:30 IST)

ಅಮೇಥಿಯಲ್ಲಿ ಆಪ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಮಾರ್ ವಿಶ್ವಾಸ್ ಮೇಲೆ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

PTI

ಆಪ್ ನಾಯಕ ಮತ್ತು ಅವರ ಬೆಂಬಲಿಗರ ಮೇಲೆ 144ನೇ ಅನುಚ್ಛೇದವನ್ನು ಮೀರಿದ್ದಕ್ಕಾಗಿ ಕೂಡ ಪ್ರಕರಣವನ್ನು ದಾಖಲಿಸಿಲಾಗಿದ್ದು ಪೋಲಿಸರು ಮುಂದಿನ ಕ್ರಮವನ್ನು ಕೈಗೊಳ್ಳಲಿದ್ದಾರೆ.

ಶುಕ್ರವಾರ ಕುಮಾರ್ ಬಿಸ್ವಾಸ್ ಅವರು ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿಯವರ ಮೇಲೆ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸುತ್ತ ಗೌರಿಗಂಜ್ ಠಾಣೆಯ ಹೊರಗೆ ಪ್ರತಿಭಟನೆಗೆ ಕುಳಿತಿದ್ದರು.

ಅವರ ದೂರಿನನ್ವಯ ಪೋಲಿಸರು ಕಾಂಗ್ರೆಸ್ ಬೆಂಬಲಿಗರಾದ ವಿನೋದ್ ಕುಮಾರ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ತಮ್ಮ ಪ್ರಾಣಕ್ಕೆ ಅಪಾಯವಿದೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಹತ್ತಿರದವರೊಬ್ಬರು ನನ್ನ ಪ್ರಾಣ ತೆಗೆಯುವ ಬೆದರಿಕೆ ಒಡ್ಡಿದ್ದಾರೆ ಎಂದು ವಿಶ್ವಾಸ್ ದೂರಿದ್ದರು. ಅವರ ದೂರಿನ ಪ್ರಕಾರ ಕಾಂಗ್ರೆಸ್ ಬೆಂಬಲಿಗರೊಬ್ಬರ ಮೇಲೆ ಕೇಸ್ ದಾಖಲಿಸಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...