ಕೇಜ್ರಿವಾಲ್ ಸರಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆಯುವ ಅವಸರವಿಲ್ಲ: ಕಾಂಗ್ರೆಸ್

ನವದೆಹಲಿ, ಸೋಮವಾರ, 27 ಜನವರಿ 2014 (19:20 IST)

PTI
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರಕಾರಕ್ಕೆ ನೀಡಿದ ಬೆಂಬಲವನ್ನು ಹಿಂದಕ್ಕೆ ಪಡೆಯುವ ಅವಸರವಿಲ್ಲ. ಆದರೆ, ಸರಕಾರದ ಅಢಳಿತ ರೀತಿ ಮತ್ತು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬಗ್ಗೆ ಸಚಿವ ಸೋಮನಾಥ್ ಭಾರ್ತಿ ನೀಡಿದ ಹೇಳಿಕೆ ಬೇಸರ ತರಿಸಿದೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.

ಆಮ್ ಆದ್ಮಿ ಪಕ್ಷಕ್ಕೆ ನೀಡುವ ಸಂದರ್ಭದಲ್ಲಿ ಹಲವು ವಿಷಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಇಂದು ಬೆಂಬಲ ನೀಡಿ ನಾಳೆ ಬೆಂಬಲ ವಾಪಸ್ ಪಡೆಯುವ ಪ್ರಶ್ನೆಯಿಲ್ಲ. ಇಂತಹ ವಿಷಯಗಳನ್ನು ಕಾಂಗ್ರೆಸ್ ಪಕ್ಷ ಲಘುವಾಗಿ ಪರಿಗಣಿಸುವುದಿಲ್ಲ. ತಾಳ್ಮೆಯಿಂದ ನಿರೀಕ್ಷಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ ಎಐಸಿಸಿ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಸಮಯದ ಗಡುವು ನೀಡಿಲ್ಲ. ದೆಹಲಿ ಜನತೆಯ ಮೇಲೆ ಮತ್ತೊಂದು ಚುನಾವಣೆಯ ಹೊರೆ ಹಾಕಬಾರದು ಎನ್ನುವ ಉದ್ದೇಶದಿಂದ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡಲಾಗಿದೆ. ಆದರೆ, ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದಲ್ಲಿದ್ದ ವೇಗ ಇದೀಗ ಸರಕಾರ ನಡೆಸುವಾಗ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ ಲೇವಡಿ ಮಾಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :