ಗುಜರಾತ್ ನಂಬರ್ ಒನ್ ರಾಜ್ಯ ಎಂದು ಘೋಷಿಸಿದ್ದು ಸೋನಿಯಾ: ರಾಹುಲ್‌ಗೆ ಮೋದಿ ತಿರುಗೇಟು

ಬಿಜಾಪುರ, ಸೋಮವಾರ, 31 ಮಾರ್ಚ್ 2014 (15:45 IST)

PTI
ಗುಜರಾತ್ ರಾಜ್ಯದ ಅಭಿವೃದ್ಧಿ ಬಲೂನಿನಂತೆ ಎನ್ನುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ಟೀಕೆಗಳನ್ನು ಮಾಡುವುದನ್ನು ಬಿಟ್ಟು ದೇಶದ ಅಭಿವೃದ್ಧಿಯತ್ತ ಗಮನಹರಿಸಿ. ನಿಮ್ಮ ತಾಯಿ ಸೋನಿಯಾ ಗಾಂಧಿಯೇ ಗುಜರಾತ್ ರಾಜ್ಯ ನಂಬರ್ ಒನ್ ರಾಜ್ಯ ಎಂದು ಘೋಷಿಸಿದ್ದಾರೆ. ನಿಮ್ಮ ತಾಯಿಯನ್ನೇ ನೀವು ನಂಬುವುದಿಲ್ಲವಾ ಎಂದು ಪ್ರಶ್ನಿಸಿದ್ದಾರೆ.

ರಾಜೀವ್ ಗಾಂಧಿ ಫೌಂಡೇಶನ್‌ನ ಮುಖ್ಯಸ್ಥೆಯಾದ ಸೋನಿಯಾ ಗಾಂಧಿ, ಗುಜರಾತ್ ರಾಜ್ಯ ಅಭಿವೃದ್ಧಿಯಲ್ಲಿ ನಂಬರ್ ಒನ್ ರಾಜ್ಯ ಎಂದು ಘೋಷಿಸಿದ್ದಾರೆ. ನಿಮ್ಮ ತಾಯಿಯ ಘೋಷಣೆಯಲ್ಲಿ ಅಸತ್ಯವಿದೆಯೇ? ಅಥವಾ ಅವರು ನಿಮ್ಮ ಹಾಗೆ ಬಲೂನ್‌ಗಳನ್ನು ಬಿಡುತ್ತಾರೆಯೇ ಎಂದು ತಿರುಗೇಟು ನೀಡಿದ್ದಾರೆ.

ಗುಜರಾತ್ ರಾಜ್ಯದ ಜನತೆ ಕಳೆದ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನತೆ ತಿರಸ್ಕರಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಬಲೂನ್‌ ಆಗಿದ್ರೆ ಜನ ಯಾಕೆ ಗೆಲ್ಲಿಸುತ್ತಿದ್ದಾರೆ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರು ಉತ್ತರ ಹೇಳಬೇಕಾಗಿದೆ ಎಂದರು.

ಗುಜರಾತ್ ರಾಜ್ಯದ ಅಭಿವೃದ್ಧಿ ಎನ್ನುವ ಭಾರಿ ಬಲೂನ್‌ನಲ್ಲಿ ಗ್ಯಾಸ್ ತುಂಬಲಾಗಿದೆ. ಕಳೆದ 2004 ಮತ್ತು 2009ರಲ್ಲಿ ಭಾರತ ಶೈನಿಂಗ್ ಎನ್ನುವ ಬಲೂನ್ ಒಡೆದಂತೆ ಈ ಬಾರಿಯೂ ಬಿಜೆಪಿ ಬಲೂನ್ ಒಡೆಯಲಿದೆ ಎಂದು ರಾಹುಲ್ ಗಾಂಧಿ ಇತ್ತೀಚೆಗೆ ಹೇಳಿಕೆ ನೀಡಿದ್ದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...