ಚಿಕ್ಕಬಳ್ಳಾಪುರ ಕ್ಷೇತ್ರದ ಸ್ಪರ್ಧೆಗೆ ನಾಪಪತ್ರ ಸಲ್ಲಿಸಿದ ಕುಮಾರಸ್ವಾಮಿ

ಬುಧವಾರ, 26 ಮಾರ್ಚ್ 2014 (18:56 IST)

PR
PR
ಬೆಂಗಳೂರು: ಕುಮಾರಸ್ವಾಮಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆಂದು ಜೆಡಿಎಸ್‌ನಲ್ಲಿ ಎದ್ದಿರುವ ಎಲ್ಲ ಗೊಂದಲಗಳಿಗೂ ಇಂದು ತೆರೆಬೀಳಲಿದ್ದು, ಲೋಕಸಭೆ ಚುನಾವಣೆ ಸ್ಪರ್ಧೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ್ದರಿಂದ ಲೋಕಸಭೆ ಕ್ಷೇತ್ರದಲ್ಲಿ ಇಂದು ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿದ ಕುಮಾರಸ್ವಾಮಿ ನಂತರ ನಾಮಪತ್ರ ಸಲ್ಲಿಸಿದರು. ಚಿಕ್ಕಬಳ್ಳಾಪುರದಿಂದ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಕಣಕ್ಕಳಿಯುತ್ತಿದ್ದು ಚುನಾವಣೆ ಕಣ ರಂಗೇರಿದೆ. ಈ ಕ್ಷೇತ್ರದಲ್ಲಿ ಎತ್ತಿನಹೊಳೆ ಯೋಜನೆಯನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸುವುದಾಗಿ ಮೊಯ್ಲಿ ಭರವಸೆ ನೀಡಿದ್ದಾರೆ.

ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ ಎಂಬ ಗೊಂದಲ ಮತದಾರರಲ್ಲಿತ್ತು. ಆದರೆ ಅಂತಿಮವಾಗಿ ಕೆಲವು ಕಾರಣಗಳಿಂದಾಗಿ ಕುಮಾರಸ್ವಾಮಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿದರುಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...