ಜೆಡಿಎಸ್‌ನಿಂದ ಸೂರ್ಯಕಾಂತ್ ನಾಗಮಾರಪಳ್ಳಿ ಸ್ಪರ್ಧೆ ಸಾಧ್ಯತೆ

ಬೀದರ್, ಶನಿವಾರ, 22 ಮಾರ್ಚ್ 2014 (13:45 IST)

PTI
ರಾಜ್ಯದಲ್ಲಿ ಲೋಕಸಭಾ ಚುನಾವಣಾ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ಬಿಜೆಪಿ ಮತ್ತು ಜೆಡಿಎಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬೀದರ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಎಚ್‌.ಡಿ.ಕುಮಾರಸ್ವಾಮಿ ಇಂಗಿತ ರಾಮನಗರದ ಜೆಡಿಎಸ್‌ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ.

ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಟಿಕೆಟ್ ಸಿಗದ ಕಾರಣ ಅವರ ಬೆಂಬಲಿಗರು ಉದಗೀರ ರಸ್ತೆಯಲ್ಲಿರುವ ಬೀದರ್‌ ನಗರ ಬಿಜೆಪಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿದರು. ಪಕ್ಷ ಹಾಗೂ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ವೇಳೆ ಬಿಜೆಪಿ ಕಚೇರಿ ಬಂದ್‌ ಆಗಿತ್ತು. ಕಚೇರಿಯ ಕಟ್ಟಡದ ಕಿಟಕಿಗಳತ್ತ ಕಲ್ಲು ತೂರಿದ ಪರಿಣಾಮ ಗಾಜುಗಳು ಪುಡಿಯಾದವು. ಅದೇ ಕಟ್ಟಡದ ಕೆಳಗಡೆ ಇದ್ದ ಪ್ಲಾಸ್ಟಿಕ್‌ ಕುರ್ಚಿಗಳನ್ನು ನೆಲಕ್ಕೆ ಅಪ್ಪಳಿಸಿ ಮುರಿದು ಹಾಕಿದರು.ಒಂದು ಹಂತದಲ್ಲಿ ರಸ್ತೆ ತಡೆ ನಡೆಸಿ ಟೈರ್‌ ಸುಡಲು ಯತ್ನಿಸಿದರಾದರೂ ಅದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಮುಖಂಡ ಡಿ.ಕೆ. ಸಿದ್ರಾಮ, ಝರೆಪ್ಪಾ ಮಮದಾಪುರ ಮತ್ತಿತರರು ಇದ್ದರು.

ಬಂಡೇಳುವ ಸಾಧ್ಯತೆ: ಈ ಮಧ್ಯೆ ಸೂರ್ಯಕಾಂತ ನಾಗಮಾರಪಲ್ಲಿ ಬಂಡೆದ್ದು ಪಕ್ಷೇತರರಾಗಿ ಅಥವಾ ಜೆಡಿಎಸ್‌ ಅಭ್ಯರ್ಥಿಯಾಗಿ ಬೀದರ್‌ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಬೀದರ್‌ನಲ್ಲಿ ಬೃಹತ್‌ ಸಮಾವೇಶ ಆಯೋಜಿಸುವುದಕ್ಕೂ ಅವರು ಸಿದ್ಧತೆ ನಡೆಸಿದ್ದಾರೆ. ಸೂರ್ಯಕಾಂತ ಅವರಿಗೇ ಟಿಕೆಟ್‌ ನೀಡಲು ರಾಜ್ಯದ ಮುಖಂಡರು ಒಪ್ಪಿ, ಅದನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದ್ದರು. ಆದರೆ ಹರಿಯಾಣ ಮೂಲದ ಯೋಗಗುರುವೊಬ್ಬರ ಒತ್ತಡಕ್ಕೆ ಮಣಿದ ಪಕ್ಷದ ದೆಹಲಿ ವರಿಷ್ಠರು ಸೂರ್ಯಕಾಂತ ಅವರ ಹೆಸರನ್ನು ಬದಲಿಸಿ, ಭಗವಂತ್ ಖೂಬಾ ಅವರಿಗೆ ಟಿಕೆಟ್‌ ಘೋಷಿಸಿದರು ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...