ದಿಗ್ವಿಜಯ್ ಸಿಂಗ್ ಉತ್ತಮ ಪ್ರಧಾನಿ ಅಭ್ಯರ್ಥಿ: ಸುಷ್ಮಾ ಸ್ವರಾಜ್ ತಿರುಗೇಟು

ನವದೆಹಲಿ, ಬುಧವಾರ, 26 ಮಾರ್ಚ್ 2014 (16:38 IST)

PTI
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗಿಂತ ದಿಗ್ವಿಜಯ್ ಸಿಂಗ್ ಉತ್ತಮ ಪ್ರಧಾನಿ ಅಭ್ಯರ್ಥಿ ಎಂದು ಲೋಕಸಭೆಯ ವಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ತಿರುಗೇಟು ನೀಡಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರಿಗಿಂತ ಸುಷ್ಮಾ ಉತ್ತಮ ಪ್ರಧಾನಿ ಅಭ್ಯರ್ಥಿ ಎಂದು ದಿಗ್ವಿಜಯ್ ನೀಡಿದ ಹೇಳಿಕೆಗೆ ಸುಷ್ಮಾ ಪ್ರತ್ರಿಕ್ರಿಯೆ ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಸತತ ಮೂರು ಬಾರಿ ಸೋಲನುಭವಿಸಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಧೈರ್ಯವಿಲ್ಲದ ವ್ಯಕ್ತಿಯ ಸಲಹೆಗಳು ಬಿಜೆಪಿಗೆ ಅಗತ್ಯವಿಲ್ಲ. ಅವರ ಹೇಳಿಕೆಗಳು ಹಾಸ್ಯಾಸ್ಪದ ಎಂದು ಬಿಜೆಪಿ ಕಿಡಿಕಾರಿತ್ತು.

ಬಿಜೆಪಿಯ ಹೈಕಮಾಂಡ್ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಂಡಿದೆ. ಆದರೆ, ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಯಾರು ಎನ್ನುವುದನ್ನು ದಿಗ್ವಿಜಯ್ ಸಿಂಗ್ ಬಹಿರಂಗಪಡಿಸಲಿ ಎಂದು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಸವಾಲ್ ಹಾಕಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...