ದೇಶದಲ್ಲಿ ಮೋದಿಯದಲ್ಲ, ಬಿಜೆಪಿಯ ಅಲೆಯಿದೆ: ಜೋಶಿ

ನಮದೆಹಲಿ, ಸೋಮವಾರ, 14 ಏಪ್ರಿಲ್ 2014 (09:07 IST)

ಭಾರತೀಯ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿಯ ವಿರುದ್ಧ ಅಪರೋಕ್ಷವಾಗಿ ದಾಳಿ ಮಾಡಿರುವ ಪಕ್ಷದ ಹಿರಿಯ ನಾಯಕ ಮುರಳಿ ಮನೋಹರ ಜೋಶಿ "ದೇಶದಲ್ಲಿ ಮೋದಿಯ ಅಲೆಯಿಲ್ಲ, ಬದಲಾಗಿ ಬಿಜೆಪಿಯ ಅಲೆಯಿದೆ" ಎಂದು ಹೇಳಿದ್ದಾರೆ.

PTI

ಪಕ್ಷದ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿರುವ ಅವರು ಮೋದಿ "ತಮ್ಮ ರಾಜ್ಯದಲ್ಲಿ ಜಾರಿಗೆ ತಂದಿರುವ ಅಭಿವೃದ್ಧಿ ಸೂತ್ರವಾದ ಗುಜರಾತ್ ಮಾದರಿಯನ್ನು ಎಲ್ಲ ರಾಜ್ಯಗಳಿಗೆ ಅನ್ವಯಿಸಲು ಸಾಧ್ಯವಿಲ್ಲ. ಯಾವುದೋ ಒಂದು ರಾಜ್ಯದ ಮಾದರಿಯನ್ನು ಉಳಿದ ಎಲ್ಲ ರಾಜ್ಯಗಳಲ್ಲೂ ಜಾರಿಗೆ ತರುವುದನ್ನು ನಾನು ಒಪ್ಪುವುದಿಲ್ಲ" ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮೋದಿಗಾಗಿ ವಾರಣಾಸಿ ಕ್ಷೇತ್ರವನ್ನು ಬಿಟ್ಟು ಕೊಟ್ಟಿರುವ ಜೋಶಿ, "ಪ್ರಧಾನಮಂತ್ರಿ ಸ್ಥಾನದ ಅಭ್ಯರ್ಥಿ ಕೇವಲ ಉನ್ನತ ಹುದ್ದೆಗಾಗಿ ಮಾತ್ರ ಪಕ್ಷದ ಪ್ರತಿನಿಧಿಯಾಗಿದ್ದಾರೆ ಮತ್ತು ಅವರಿಗೆ ಸಂಪೂರ್ಣ ದೇಶದ ಮತ್ತು ಬಿಜೆಪಿಯ ನಾಯಕರ ಸಮರ್ಥನೆ ಸಿಗುತ್ತಿದೆ" .

"ಮೋದಿ ಪ್ರಧಾನಮಂತ್ರಿ ಸ್ಥಾನದ ಒಬ್ಬ ಅಭ್ಯರ್ಥಿಯಾಗಿದ್ದಾರೆ. ಆದ್ದರಿಂದ ಇದು ವಯಕ್ತಿಕ ವಿಷಯವಾಗುವುದಿಲ್ಲ. ಇದೊಂದು ಪ್ರತಿನಿಧಿತ್ವದ ಅಲೆಯಾಗಿದೆ" ಎಂದು ಎಂದು ಜೋಶಿ ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ಆಯೋಗದ ಕ್ಷಮೆ ಕೋರಲಾರೆ, ಆದ್ರೆ ಅಮಿತ್ ಶಾ ನಿಷೇಧ ತೆರುವುಗೊಳಿಸಿದ್ದು ಯಾಕೆ?: ಅಜಂ ಖಾನ್

ದ್ವೇಷದ ಭಾಷಣ ಕುರಿತಂತೆ ಚುನಾವಣೆ ಆಯೋಗದ ಕ್ಷಮೆಯಾಚಿಸಲು ನಿರಾಕರಿಸಿರುವ ಯುಪಿ ಸಚಿವ ಅಜಂ ಖಾನ್, ನನ್ನ ...

ಮುರಳಿ ಮನೋಹರ್ ಜೋಷಿ ಕಾಲಿಗೆ ಬಿದ್ದು ನಮಸ್ಕರಿಸಿದ ನರೇಂದ್ರ ಮೋದಿ

ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಚಾರ ವೇದಿಕೆಯಲ್ಲಿಯೇ, ಪಕ್ಷದ ಹಿರಿಯ ನಾಯಕ ಮುರಳಿ ...