ದೇಶದ ಜನತೆಗೆ ಶಾಂತಿ, ನೆಮ್ಮದಿ, ಸಂತೋಷ ತರುವುದೇ ಬಿಜೆಪಿಯ ಪ್ರಮುಖ ಟಾರ್ಗೆಟ್: ಮೋದಿ

ಲಕ್ನೋ, ಶುಕ್ರವಾರ, 24 ಜನವರಿ 2014 (14:17 IST)

PR
ದೇಶದಲ್ಲಿ ದುರಾಡಳಿತ ತಾಂಡವಾಡುತ್ತಿದೆ. ದೇಶದ ಜನತೆ 60 ತಿಂಗಳ ಕಾಲವಕಾಶ ನೀಡಿದಲ್ಲಿ ನಾನು ನಿಮಗೆ ಶಾಂತಿ, ನೆಮ್ಮದಿ ಮತ್ತು ಸಂತೋಷವನ್ನು ನೀಡುತ್ತೇನೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಪಕ್ಷ ಗುಜರಾತ್‌ನಂತೆ ರಾಜ್ಯವನ್ನು ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಉತ್ತರಪ್ರದೇಶದ ಪ್ರತಿಯೊಂದು ಜಿಲ್ಲೆಯ ಜನರು ಉದ್ಯೋಗದ ಹುಡುಕಾಟದಲ್ಲಿ ಗುಜರಾತ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಒಂದು ವೇಳೆ ಮುಲಾಯಂ ಸಿಂಗ್ ಯಾದವ್ ರಾಜ್ಯದಲ್ಲಿ ಅಭಿವೃದ್ಧಿ ತಂದು ಗುಜರಾತ್ ಜನತೆ ಉತ್ತರಪ್ರದೇಶಕ್ಕೆ ಉದ್ಯೋಗಕ್ಕಾಗಿ ಅರಸಿ ಬಂದಲ್ಲಿ ಸಂತಸವಾಗುತ್ತದೆ ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಜಾತಿ ಆಧಾರಿತ ರಾಜಕೀಯ ಮಾಡುತ್ತಿವೆ. ಎಸ್‌ಪಿ, ಬಿಎಸ್‌ಪಿ ಅಥವಾ ಕಾಂಗ್ರೆಸ್ ಪಕ್ಷಗಳು ರಾಜ್ಯದ ಅಭಿವೃದ್ಧಿಯ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ. ಒಂದು ವೇಳೆ ರಾಜ್ಯದ ಜನತೆ ಬಿಜೆಪಿ ಪಕ್ಷಕ್ಕೆ ಅವಕಾಶ ನೀಡಿದಲ್ಲಿ ಬಿಜೆಪಿ ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಶ್ರಮಿಸುತ್ತದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :