ನನ್ನ ಹೆಲಿಕಾಪ್ಟರ್ ಹಾರಾಟಕ್ಕೆ ಅಧಿಕಾರಿಗಳು ಅನುಮತಿ ನೀಡಲಿಲ್ಲ: ಮೋದಿ ಅಸಮಾಧಾನ

ಬರೈಲಿ, ಮಂಗಳವಾರ, 1 ಏಪ್ರಿಲ್ 2014 (18:45 IST)

PR
ದೆಹಲಿ ವಿಮಾನ ನಿಲ್ದಾಣದಲ್ಲಿರುವ ಅಧಿಕಾರಿಗಳು ಹೆಲಿಕಾಪ್ಟರ್ ಹಾರಾಟಕ್ಕೆ ಅನುಮತಿ ನೀಡುವಲ್ಲಿ ಮೀನಮೇಷ ಎಣಿಸಿದ್ದರಿಂದ ಸಾರ್ವಜನಿಕ ಸಭೆಗೆ ಹಾಜರಾಗಲು ವಿಳಂಬವಾಯಿತು ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ನಿಮ್ಮನ್ನು ಸುಡುಬಿಸಿಲಲ್ಲಿಟ್ಟು ಸಭೆಗೆ ವಿಳಂಬವಾಗಿ ಆಗಮಿಸಿದ್ದಕ್ಕಾಗಿ ಕ್ಷಮೆ ಕೋರುತ್ತೇನೆ. ಆದರೆ, ಇದು ನನ್ನಿಂದಾದ ವಿಳಂಬವಲ್ಲ. ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಗಳು ನಮ್ಮ ಹೆಲಿಕಾಪ್ಟರ್‌ ಹಾರಾಟ ನಡೆಸಲು ಅನುಮತಿ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾಮಾನ್ಯವಾಗಿ ಜನತೆಗೆ ನನ್ನಿಂದ ಯಾವುದೇ ರೀತಿಯ ತೊಂದರೆಯಾಗಬಾರದು ಎಂದು ನಾನು ಬಯಸುತ್ತೇನೆ. ಆದರೆ, ಇಂದು ನಿಮ್ಮನ್ನು ಬಿರುಬಿಸಿಲಲ್ಲಿ ಕಾಯಿಸಿದ್ದಕ್ಕಾಗಿ ಕ್ಷಮೆಯಿರಲಿ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕೋರಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :