ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎನ್ನುವುದು ಕಲ್ಪನೆ: ಮಮತಾ ಬ್ಯಾನರ್ಜಿ

ಕೋಲಕಾತಾ, ಮಂಗಳವಾರ, 15 ಏಪ್ರಿಲ್ 2014 (20:06 IST)

'ನರೇಂದ್ರ ಮೋದಿ ಪ್ರಧಾನಿಯಾಗುತ್ತಾರೆ ಎನ್ನುವುದು ಕಲ್ಪನೆ' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

PTI

ಲೋಕಸಭಾ ಚುನಾವಣೆಯ ನಂತರ ಫೆಡರಲ್ ಫ್ರಂಟ್ ಸರ್ಕಾರ ರೂಪುಗೊಳ್ಳುತ್ತದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಕೋಲ್ಕತಾದಲ್ಲಿ ನಡೆದ ಸಂದರ್ಶನವೊಂದರಲ್ಲಿ ಮೋದಿ ಪ್ರಧಾನಿಯಾದರೆ ನೀವು ಉತ್ತಮ ಹಣಕಾಸು ಸೌಲಭ್ಯವನ್ನು ನಿರೀಕ್ಷಿಸುತ್ತೀರಾ ಎಂದು ಮಮತಾರವರನ್ನು ಕೇಳಿದಾಗ "ಮೋದಿ ಪ್ರಧಾನಿಯಾಗುತ್ತಾರೆ ಎನ್ನುವುದು ಕಲ್ಪನೆ . ಆದ್ದರಿಂದ, ನಾನು ಈ ಕಾಲ್ಪನಿಕ ಪ್ರಶ್ನೆಗೆ ಉತ್ತರ ನೀಡಲು ಬಯಸುವುದಿಲ್ಲ" ಎಂದು ಅವರು ತಿಳಿಸಿದರು.

"ಬಂಗಾಳಕ್ಕೆ ಭಿಕ್ಷಾಪಾತ್ರೆಯನ್ನು ಹಿಡಿದುಕೊಂಡು ಹೋಗುವ ಅಗತ್ಯವಿಲ್ಲ. ಎಡ ಪಂಥದವರ ಮೂರು ದಶಕಗಳ ಆಡಳಿತದಿಂದ ಉಂಟಾಗಿರುವ ಬಂಗಾಳದ ಹೊರೆಯನ್ನು ಪುನರ್ ರಚನೆ ಮಾಡುತ್ತೇವೆ ಎಂದು 2011ರ ಚುನಾವಣೆಗೆ ಮೊದಲು ಪ್ರಧಾನಿ ವಾಗ್ದಾನ ಮಾಡಿದ್ದರು".

"ನಾನು ಮತ್ತು ನನ್ನ ಹಣಕಾಸು ಸಚಿವರು ಅನೇಕ ಸಭೆಗಳನ್ನು ನಡೆಸಿದೆವು. ಆದರೆ ಅವರು ಏನನ್ನೂ ಮಾಡಲಿಲ್ಲ. ಅವರು ತಮ್ಮ ಭರವಸೆಯನ್ನು ಉಳಿಸಿಕೊಳ್ಳಲಿಲ್ಲ" ಎಂದು ಮಮತಾ ಹೇಳಿದ್ದಾರೆ.

ಪಶ್ಚಿಮ ಬಂಗಾಳವನ್ನು ಗುಜರಾತ್ ಜತೆ ಹೋಲಿಕೆ ಮಾಡಿದ ಮುಖ್ಯಮಂತ್ರಿ ಮಮತಾ, "ಗುಜರಾತ್ ಜತೆ,ಬಂಗಾಳವನ್ನು ಹೋಲಿಕೆ ಮಾಡುವುದು ಶ್ರೀಮಂತ, ಸವಲತ್ತು ಪಡದ ಮಗುವನ್ನು ಮತ್ತು ಪೋಷಣೆಯಿಲ್ಲದ ಮಗುವಿನ ಜತೆ ಹೋಲಿಸಿದ ಹಾಗೆ" ಎಂದು ಹೇಳಿದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ಆಯೋಗದ ಕ್ಷಮೆ ಕೋರಲಾರೆ, ಆದ್ರೆ ಅಮಿತ್ ಶಾ ನಿಷೇಧ ತೆರುವುಗೊಳಿಸಿದ್ದು ಯಾಕೆ?: ಅಜಂ ಖಾನ್

ದ್ವೇಷದ ಭಾಷಣ ಕುರಿತಂತೆ ಚುನಾವಣೆ ಆಯೋಗದ ಕ್ಷಮೆಯಾಚಿಸಲು ನಿರಾಕರಿಸಿರುವ ಯುಪಿ ಸಚಿವ ಅಜಂ ಖಾನ್, ನನ್ನ ...

ಮುರಳಿ ಮನೋಹರ್ ಜೋಷಿ ಕಾಲಿಗೆ ಬಿದ್ದು ನಮಸ್ಕರಿಸಿದ ನರೇಂದ್ರ ಮೋದಿ

ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಚಾರ ವೇದಿಕೆಯಲ್ಲಿಯೇ, ಪಕ್ಷದ ಹಿರಿಯ ನಾಯಕ ಮುರಳಿ ...