ನರೇಂದ್ರ ಮೋದಿಯನ್ನು ಟೀಕಿಸಿ, ಸೋನಿಯಾರನ್ನು ಹೊಗಳಿದ ಸ್ಟಾಲಿನ್

ಚೆನ್ನೈ, ಶನಿವಾರ, 12 ಏಪ್ರಿಲ್ 2014 (18:56 IST)

PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪ್ರದಾನಮಂತ್ರಿಯಾಗಲು ಅರ್ಹರಲ್ಲ ಎಂದು ಡಿಎಂಕೆ ಪಕ್ಷದ ಉತ್ತರಾಧಿಕಾರಿ ಎಂ.ಕೆ.ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಯಾವುದೇ ಮೋದಿ ಅಲೆಯಿಲ್ಲ. ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿ. ಮಾಧ್ಯಮಗಳು ಮಾತ್ರ ಮೋದಿ ಬಗ್ಗೆ ಮಾತನಾಡುತ್ತಿವೆ. ಆದರೆ, ಮೋದಿಯನ್ನು ಜನತೆ ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ.

ಮೋದಿ ಗುಜರಾತ್ ಅಭಿವೃದ್ದಿಯ ಬಗ್ಗ ಮಾತನಾಡುತ್ತಾರೆ. ಆದರೆ, ವಾಸ್ತವಾಂಶದಲ್ಲಿ ಗುಜರಾತ್ ಅವರು ಹೇಳಿದಷ್ಟು ಅಭಿವೃದ್ಧಿಯಾಗಿಲ್ಲ. ತಮ್ಮ ರಾಜ್ಯವನ್ನೇ ಅಭಿವೃದ್ಧಿಪಡಿಸದ ಮೋದಿ ದೇಶವನ್ನು ಹೇಗೆ ಅಭಿವೃದ್ಧಿಪಥದತ್ತ ತೆಗೆದುಕೊಂಡು ಹೋಗುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಅಭಿವೃಧಿ ಹರಿಕಾರ ಎಂದು ಬಿಜೆಪಿಯಿಂದ ಕರೆಸಿಕೊಳ್ಳುವ ನರೇಂದ್ರ ಮೋದಿಗೆ ಸೋಲಿನ ಭೀತಿ ಕಾಡುತ್ತಿದೆ. ಆದ್ದರಿಂದ ಎರಡು ಕ್ಷೇತ್ರಗಳ್ಲಲಿ ಕಣಕ್ಕಿಳಿದಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮೋದಿ ವೈವಾಹಿಕ ಜೀವನದ ಬಗ್ಗೆ ಪ್ರತಿಕ್ರಿಯೆ ನೀಡಿದ ಸ್ಟಾಲಿನ್, ಜನತೆ ಅದರ ಬಗ್ಗೆ ಯೋಚನೆ ಮಾಡುತ್ತಾರೋ ಇಲ್ಲವೋ ಆದರೆ,. ಬಿಜೆಪಿ ನಾಯಕರು ಚಿಂತನೆ ಮಾಡುವ ಅಗತ್ಯವಿದೆ ಎಂದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ಆಯೋಗದ ಕ್ಷಮೆ ಕೋರಲಾರೆ, ಆದ್ರೆ ಅಮಿತ್ ಶಾ ನಿಷೇಧ ತೆರುವುಗೊಳಿಸಿದ್ದು ಯಾಕೆ?: ಅಜಂ ಖಾನ್

ದ್ವೇಷದ ಭಾಷಣ ಕುರಿತಂತೆ ಚುನಾವಣೆ ಆಯೋಗದ ಕ್ಷಮೆಯಾಚಿಸಲು ನಿರಾಕರಿಸಿರುವ ಯುಪಿ ಸಚಿವ ಅಜಂ ಖಾನ್, ನನ್ನ ...

ಮುರಳಿ ಮನೋಹರ್ ಜೋಷಿ ಕಾಲಿಗೆ ಬಿದ್ದು ನಮಸ್ಕರಿಸಿದ ನರೇಂದ್ರ ಮೋದಿ

ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಚಾರ ವೇದಿಕೆಯಲ್ಲಿಯೇ, ಪಕ್ಷದ ಹಿರಿಯ ನಾಯಕ ಮುರಳಿ ...