ನರೇಂದ್ರ ಮೋದಿಯನ್ನು ಬೆಂಬಲಿಸಿಲ್ಲ: ಉಲ್ಟಾ ಹೊಡೆದ ಶ್ರೀ ಶ್ರೀ ರವಿಶಂಕರ ಗುರೂಜಿ

ನವದೆಹಲಿ, ಶನಿವಾರ, 22 ಮಾರ್ಚ್ 2014 (15:14 IST)

PTI
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ನಾನು ಹೇಳಿಲ್ಲ ಎಂದು ಶ್ರೀ ಶ್ರೀ ರವಿಶಂಕರ ಗುರೂಜಿ ಇದೀಗ ಉಲ್ಟಾ ಹೊಡೆದಿದ್ದಾರೆ.

ಕೆಲ ದಿನಗಳ ಹಿಂದೆ ದೇಶದ ಅಡಳಿತದ ಚುಕ್ಕಾಣಿ ರಾಹುಲ್‌ನಂತ ಯುವಕರಿಗೆ ಸೂಕ್ತವಲ್ಲ. ಮೋದಿಯಂತಹ ಅನುಭವಿಗಳು ಅಡಳಿತ ಚುಕ್ಕಾಣಿ ಹಿಡಿಯಬೇಕು ಎಂದು ಹೇಳಿಕೆ ನೀಡಿದ್ದ ಧಾರ್ಮಿಕ ಗುರು ಇದೀಗ ಮತ್ತೊಂದು ಹೇಳಿಕೆ ನೀಡಿ ವಿವಾದ ಸೃಷ್ಠಿಸಿದ್ದಾರೆ.

ಬಿಜೆಪಿ ಪಕ್ಷಕ್ಕೆ ಮತ ಹಾಕಿ ಎಂದು ಜನತೆಗೆ ನಾನು ಯಾವತ್ತೂ ಹೇಳಿಲ್ಲ. ಆದರೆ, ಕೇಂದ್ರದಲ್ಲಿ ಸ್ಥಿರ ಸರಕಾರ ಅಧಿಕಾರಕ್ಕೆ ಬರಬೇಕು ಎನ್ನುವುದೇ ನಮ್ಮ ಬಯಕೆ ಎಂದರು.

ದೇಶದ ಕೆಲ ಮಾಧ್ಯಮಗಳು ಗುಜರಾತ್‌ನಲ್ಲಿ ಮೋದಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿರುವುದನ್ನು ಮಾತ್ರ ನಾನು ಉಲ್ಲೇಖಿಸಿದ್ದೆ ಎಂದು ಹೇಳಿ ನುಣುಚಿಕೊಂಡಿದ್ದಾರೆ.

ಕಳೆದ 2002ರಲ್ಲಿ ಗುಜರಾತ್ ದಂಗೆಯಾದಾಗ ಮುಖ್ಯಮಂತ್ರಿ ನರೇಂದ್ರ ಮೋದಿ ಹೊಸ ಮುಖ್ಯಮಂತ್ರಿಯಾಗಿದ್ದರು. ಅವರಿಗೆ ಅನುಭವವಿರಲಿಲ್ಲ. ಇದೀಗ ತುಂಬಾ ಅನುಭವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ದೇಶದ ಪ್ರತಿಯೊಂದು ಪಕ್ಷಗಳು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿಯನ್ನು ಮೊದಲೇ ಘೋಷಿಸಬೇಕು. ದೇಶದ ಜನತೆಗೆ ತಮ್ಮ ಪ್ರಧಾನಿಯಾಗುವ ವ್ಯಕ್ತಿಯ ಬಗ್ಗೆ ಸಂಪೂರ್ಣ ಮಾಹಿತಿಯಿರಬೇಕು ಎಂದು ಶ್ರೀ ಶ್ರೀ ಶ್ರೀ ರವಿಶಂಕರ್ ಸಲಹೆ ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...