ನರೇಂದ್ರ ಮೋದಿಯನ್ನು ಭೇಟಿ ಮಾಡಿಯೇ ಇಲ್ಲ ಎಂದ ಶರದ್ ಪವಾರ್

ನವದೆಹಲಿ, ಶುಕ್ರವಾರ, 31 ಜನವರಿ 2014 (13:18 IST)

PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರೊಂದಿಗೆ ರಹಸ್ಯ ಮಾತುಕತೆ ನಡೆಸಿರುವ ವರದಿಗಳು ಆಧಾರ ರಹಿತ ಮತ್ತು ಸುಳ್ಳಿನಿಂದ ಕೂಡಿವೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ನವದೆಹಲಿಯಲ್ಲಿ ಜನೆವರಿ 17 ರಂದು ಮೋದಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿರುವ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಕೇಂದ್ರ ಕೃಷಿ ಖಾತೆ ಸಚಿವ ಶರದ್ ಪವಾರ್ ಹೇಳಿದ್ದಾರೆ.

ರಾಜ್ಯಗಳ ಪ್ರವಾಸ ಸಂದರ್ಭಗಳಲ್ಲಿ ಅಥವಾ ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿಗಳ ಸಭೆಯಲ್ಲಿ ಮೋದಿಯನ್ನು ಭೇಟಿ ಮಾಡಿರಬಹುದು. ಅದರ ಹೊರತಾಗಿ ಯಾವುದೇ ರಹಸ್ಯ ಮಾಕತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪವಾರ್ ಮತ್ತು ಮೋದಿ ನಡುವೆ 30 ನಿಮಿಷಗಳ ಕಾಲ ಚರ್ಚೆ ನಡೆದಿದ್ದು, ಚರ್ಚೆಯ ಬಗ್ಗೆ ಎನ್‌ಸಿಪಿ ನಾಯಕರಿಗಾಗಲಿ ಅಥವಾ ಬಿಜೆಪಿ ಮುಖಂಡರಿಗಾಗಲಿ ಮಾಹಿತಿಯಿಲ್ಲ ಎಂದು ಮೂಲಗಳು ತಿಳಿಸಿವೆ.

ಉಭಯ ನಾಯಕರ ಮಾತುಕತೆಯಿಂದಾಗಿ ಎನ್‌ಸಿಪಿ ಪಕ್ಷ ಬಿಜೆಪಿಯೊಂದಿಗೆ ಮೈತ್ರಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.ಇದರಲ್ಲಿ ಇನ್ನಷ್ಟು ಓದಿ :