ನರೇಂದ್ರ ಮೋದಿ ಪೂಜೆಯಿಂದ ಬಿಜೆಪಿ ಪಕ್ಷ ಅವನತಿಯತ್ತ: ಜಸ್ವಂತ್

ಬಾರ್ಮೇರ್‌, ಬುಧವಾರ, 26 ಮಾರ್ಚ್ 2014 (20:38 IST)

PTI
ಬಿಜೆಪಿ ಮತ್ತು ನರೇಂದ್ರ ಮೋದಿ ವಿರುದ್ಧದ ವಾಗ್ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿರುವ ಬಂಡಾಯ ಎದ್ದಿರುವ ಬಿಜೆಪಿ ನಾಯಕ ಜಸ್ವಂತ್‌ ಸಿಂಗ್ ‘ವ್ಯಕ್ತಿಯ ವೈಭವೀಕರಣ’ ಪ್ರಜಾಪ್ರಭುತ್ವ ಮತ್ತು ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಬಾರ್ಮೇರ್‌ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿ ಒಂದು ದಿನದ ನಂತರ ಮಾತನಾಡಿದ ಅವರು ‘ಒಬ್ಬ ವ್ಯಕ್ತಿಯನ್ನು ಕೇಂದ್ರವಾಗಿರಿಸಿಕೊಂಡು ಎಲ್ಲವನ್ನೂ ನಡೆಸುವುದು ಸರಿಯಲ್ಲ. ಅದು ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಬಹುಶಃ ಯಾವುದೋ ಯೋಜನೆ ಅನ್ವಯ ಬಿಜೆಪಿ ಅಧ್ಯಕ್ಷ ರಾಜನಾಥ್‌ ಸಿಂಗ್ ನನ್ನನ್ನು ಉದ್ದೇಶಪೂರ್ವಕವಾಗಿ ಮೂಲೆಗುಂಪು ಮಾಡುತ್ತಿದ್ದಾರೆ. ನನ್ನನ್ನು ವಂಚಿಸಲಾಗಿದೆ ಮತ್ತು ಅವಮಾನಿಸಲಾಗಿದೆ. ನನಗೆ ನಿರಾಶೆಯಾಗಿದೆ. ಆದರೆ ನಾನು ಪಕ್ಷ ತೊರೆಯುವುದಿಲ್ಲ. ಅವರು ಬೇಕಿದ್ದರೆ ಉಚ್ಚಾಟಿಸಲಿ’ ಎಂದು ಜಸ್ವಂತ್‌ ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ಒಂದು ವಾರದ ಹಿಂದೆ ಬಿಜೆಪಿ ಸೇರಿರುವ ಸೋನಾರಾಂ ಚೌಧರಿ ಅವರಿಗೆ ಬಾರ್ಮೇರ್‌ ಲೋಕಸಭಾ ಕ್ಷೇತದ ಟಿಕೆಟ್‌ ನೀಡಿರುವ ಪಕ್ಷದ ನಿರ್ಧಾರ ವಿರೋಧಿಸಿ ಜಸ್ವಂತ್‌ ಬಂಡಾಯ ಎದ್ದಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...