ನರೇಂದ್ರ ಮೋದಿ ಪ್ರಧಾನಿಯಾಗುವ ಅವಸರದಲ್ಲಿದ್ದಾರೆ: ಉಲ್ಟಾ ಹೊಡೆದ ಬಾಬಾ ರಾಮದೇವ್

ನಾಗ್ಪುರ್, ಸೋಮವಾರ, 17 ಮಾರ್ಚ್ 2014 (15:02 IST)

PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಧಾನಿ ಹುದ್ದೆ ಅಲಂಕರಿಸುವ ಅವಸರದಲ್ಲಿದ್ದಾರೆ ಎಂದು ಯೋಗಾ ಗುರು ಬಾಬಾ ರಾಮದೇವ್ ಆರೋಪಿಸಿದ್ದಾರೆ. ಮೋದಿ ಕಟ್ಟಾ ಬೆಂಬಲಿಗ ಎಂದು ಹೇಳಿಕೆ ನೀಡುತ್ತಿದ್ದ ಬಾಬಾ ರಾಮದೇವ್ ಇದೀಗ ಉಲ್ಟಾ ಹೊಡೆದಿದ್ದಾರೆ.

ಬಿಜೆಪಿ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ನೇರ ನಡೆಯ ಮತ್ತು ಪ್ರಾಮಾಣಿಕ ವ್ಯಕ್ತಿ ಎಂದು ಬಣ್ಣಿಸಿದ ರಾಮದೇವ್, ಮೋದಿ ಪ್ರಧಾನಿಯಾಗುವ ಬಗ್ಗೆ ತುಂಬಾ ಅವಸರದಲ್ಲಿದ್ದಾರೆ. ಅವರಿಗೆ ತಾಳ್ಮೆ ಅಗತ್ಯವಾಗಿದೆ ಎಂದು ಸಲಹೆ ನೀಡಿದ್ದಾರೆ.

ಪಾಟಲಿಪುತ್ರದಿಂದ ತಮ್ಮ ಬೆಂಬಲಿಗ ನಿಶಿಕಾಂತ್ ಯಾದವ್ ಅವರಿಗೆ ಲೋಕಸಭೆ ಟಿಕೆಟ್ ನೀಡದಿರುವುದು ಅಸಮಾಧಾನ ಮೂಡಿಸಿದೆ. ಕಳಂಕಿತರಾದ ಬಿ.ಎಸ್.ಯಡಿಯೂರಪ್ಪ ಮತ್ತು ಶ್ರೀರಾಮುಲುನಂತಹ ವ್ಯಕ್ತಿಗಳಿಗೆ ಟಿಕೆಟ್ ನೀಡಿರುವ ಬಿಜೆಪಿ ಹೈಕಮಾಂಡ್ ಕ್ರಮ ನಿರಾಸೆ ತಂದಿದೆ ಎಂದು ಕಿಡಿಕಾರಿದ್ದಾರೆ.

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಜ್ರಿವಾಲ್ ಠೇವಣಿಯನ್ನು ಕಳೆದುಕೊಂಡಲ್ಲಿ ರಾಜಕೀಯದಿಂದ ಸನ್ಯಾಸ ಸ್ವೀಕರಿಸುತ್ತೇನೆ ಎಂದು ಪ್ರಮಾಣ ಮಾಡಬೇಕು. ಮೋದಿ ವಿರುದ್ಧ ಸ್ಪರ್ಧಿಸಿ ಕಾಂಗ್ರೆಸ್‌ಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...