ಪುತ್ರ ಅಳಗಿರಿಯನ್ನು ಪಕ್ಷದಿಂದ ಉಚ್ಚಾಟಿಸಿದ ಎಂ.ಕರುಣಾನಿಧಿ

ಚೆನ್ನೈ, ಶುಕ್ರವಾರ, 24 ಜನವರಿ 2014 (14:56 IST)

PTI
ಪಕ್ಷ ವಿರೋಧಿ ಚಟುವಟಿಕೆಯ ಆರೋಪಗಳ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿಎಂಕೆ ಅಧ್ಯಕ್ಷ ಎಂ ಕರುಣಾನಿಧಿ ತಮ್ಮ ಪುತ್ರ ಎಂ.ಕೆ.ಅಳಗಿರಿಯನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.

ಪಕ್ಷದ ಉನ್ನತ ಮೂಲಗಳ ಪ್ರಕಾರ, ಅಳಗಿರಿ ಮತ್ತು ಅವರ ಬೆಂಬಲಿಗರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರಿಂದ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿವೆ.

ಕಳೆದ ಹಲವು ತಿಂಗಳುಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಅಳಗಿರಿ ಮತ್ತು ಸಹೋದರ ಮಾಜಿ ಉಪಮುಖ್ಯಮಂತ್ರಿ ಸ್ಟಾಲಿನ್ ನಡುವಿನ ಗುದ್ದಾಟ ಇದೀಗ ಬಹಿರಂಗವಾಗಿದೆ.

ಪಕ್ಷ ವಿರೋಧಿ ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಈಗಾಗಲೇ ಅಳಗಿರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು.ಇದರಲ್ಲಿ ಇನ್ನಷ್ಟು ಓದಿ :