ಪ್ರಧಾನ ಮಂತ್ರಿಯಾಗಲು ಸಿದ್ದ: ರಾಹುಲ್ ಗಾಂಧಿ ಘೋಷಣೆ

ನವದೆಹಲಿ, ಮಂಗಳವಾರ, 14 ಜನವರಿ 2014 (12:25 IST)

PTI
ಕಾಂಗ್ರೆಸ್ ಪಕ್ಷ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದಲ್ಲಿ ಹೊಣೆಗಾರಿಕೆಯನ್ನು ನಿಬಾಯಿಸಲು ಸಿದ್ದವಾಗಿದ್ದೇನೆ ಎಂದು ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯ ಬಗ್ಗೆ ಮಾತನಾಡಿದ ರಾಹುಲ್, ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಕೇವಲ ಕೋಮುವಾದ ಹಬ್ಬಿಸಲು ಮಾತ್ರ ಸಾಧ್ಯವಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಕೇವಲ ಒಬ್ಬ ವ್ಯಕ್ತಿಯ ಅಭಿಪ್ರಾಯಗಳಿಂದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ. ಬಿಜೆಪಿ ಪಕ್ಷ ಇದೀಗ ಕೇವಲ ಒಬ್ಬ ವ್ಯಕ್ತಿಯ ಮೇಲೆ ಅವಲಂಬಿತವಾಗಿದೆಯೇ ಹೊರತು ದೇಶದ ಪರವಾಗಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಆಮ್ ಆದ್ಮಿ ಪಕ್ಷದ ವಿರುದ್ಧವು ವಾಗ್ದಾಳಿ ನಡೆಸಿದ ರಾಹುಲ್, ಕಾಂಗ್ರೆಸ್ ಪಕ್ಷ ಕೇಲ ಕಡಿಮೆ ಅವಧಿಗಾಗಿ ಜನತೆಯ ಏಳಿಗೆಯನ್ನು ಬಯಸುವುದಿಲ್ಲ. ಜನತೆಯ ಭವಿಷ್ಯ ಮುಂಬರುವ ದಿನಗಳಲ್ಲಿ ಉತ್ತಮವಾಗಿರಲಿ ಎಂದು ಹಾರೈಸುತ್ತದೆ ಎಂದು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :