ಬಿಜೆಪಿ ಜತೆ ಮೈತ್ರಿ ಕಡಿದುಕೊಂಡ ನಿತೀಶ್‌ಕುಮಾರ್‌ಗೆ ಮುಖಭಂಗ?

ಶುಕ್ರವಾರ, 14 ಮಾರ್ಚ್ 2014 (17:41 IST)

PR
ಮೋದಿ ಅವರ ಬಿಜೆಪಿ ಬಿಹಾರದಲ್ಲಿ ಸೇಡು ತೀರಿಸಿಕೊಳ್ಳುವಂತೆ ಕಾಣುತ್ತಿದೆ. ನಿತೀಶ್ ಕುಮಾರ್ ಪಕ್ಷ ಚುನಾವಣೆಯಲ್ಲಿ ಭಾರೀ ಸೋಲನ್ನು ಅನುಭವಿಸಲಿದೆ ಎಂದು ಎನ್‌ಡಿಟಿವಿ ಸಮೀಕ್ಷೆ ತಿಳಿಸಿದೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊಮ್ಮಲಿದ್ದು, 40 ಸ್ಥಾನಗಳ ಪೈಕಿ 23 ಸ್ಥಾನಗಳನ್ನು ಕಬಳಿಸಲಿದೆ. ಜೆಡಿಯು ಕೇವಲ 5 ಸೀಟುಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದ್ದು, 20 ಸ್ಥಾನಗಳನ್ನು ಕಳೆದುಕೊಳ್ಳಲಿದೆ.ಬಿಜೆಪಿ ಜತೆ ಮೈತ್ರಿ ಕಡಿದುಕೊಂಡ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾರೀ ಬೆಲೆ ತೆರಬೇಕಾಗಿದ್ದು, ಕಳೆದ ಬಾರಿಗಿಂತ 15 ಸೀಟುಗಳು ಕಡಿಮೆಯಾಗಲಿದೆ. ಮೋದಿಯವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದ ಕೂಡಲೇ ನಿತೀಶ್ ಕುಮಾರ್ ಬಿಜೆಪಿ ಜತೆ ಮೈತ್ರಿ ಕಡಿದುಕೊಂಡಿದ್ದರು.

ಲಾಲೂ ಜತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ 11 ಸೀಟುಗಳನ್ನು ಗೆಲ್ಲಲಿದೆ. ಮೋದಿಗಿಂತ ಪ್ರಧಾನಿ ಹುದ್ದೆಗೆ ತಮ್ಮ ಅರ್ಹತೆ ಮೇಲ್ಮಟ್ಟದಲ್ಲಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದರು. ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಇಂದು ಅಲೆದಾಡುತ್ತಿರುವ ಜನರಿಗೆ ನನ್ನಷ್ಟು ಅನುಭವವಿದೆಯೇ ಎಂದು ಪ್ರಶ್ನಿಸಿದ್ದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...