ಬಿಜೆಪಿ ಸೇರಿದ ಹಿರಿಯ ಪತ್ರಕರ್ತ ಎಮ್ ಜೆ ಅಕ್ಬರ್

ನವದೆಹಲಿ, ಶನಿವಾರ, 22 ಮಾರ್ಚ್ 2014 (14:04 IST)

ಸಾರ್ವತ್ರಿಕ ಚುನಾವಣೆ 2014 ಸಮೀಪಿಸುತ್ತಿದ್ದು ಪ್ರತಿಯೊಂದು ರಾಷ್ಟ್ರೀಯ ಪಕ್ಷ ಬಲಿಷ್ಠ ಅಭ್ಯರ್ಥಿಯನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ಹೊಂಚು ಹಾಕುತ್ತಿವೆ. ಭಾರತೀಯ ಜನತಾ ಪಕ್ಷ ಶನಿವಾರ ಎಮ್ಎಲ್ ಅಕ್ಬರ್‌ರವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ.

PTI

ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಎಮ್ ಜೆ ಅಕ್ಬರ್‌ರವರನ್ನು ಇಂದು ಬಿಜೆಪಿಗೆ ಸೇರಿಸಿಕೊಂಡರು ಎಂದು ಮೂಲಗಳು ತಿಳಿಸಿವೆ.ಪತ್ರಕರ್ತ ಅಕ್ಬರ್ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗುತ್ತಿದೆ.

ಮಾಜಿ ಅಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಎನ್.ಕೆ. ಸಿಂಗ್ ಸಹ ಶನಿವಾರ ಬಿಜೆಪಿಯನ್ನು ಸೇರುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯಸಭೆಗೆ ಮರು ನಾಮಕರಣ ಮಾಡಿಲ್ಲವೆಂದು ನಿರಾಶೆಗೊಳಗಾಗಿದ್ದೇನೆ ಎಂಬ ಕಾರಣ ನೀಡಿ ಅವರು ನಿನ್ನೆ ಜೆಡಿ (ಯು) ತ್ಯಜಿಸಿದರು. ಪಕ್ಷ ನಾಮನಿರ್ದೇಶನವನ್ನು ನಿರಾಕರಿಸಿದ್ದಕ್ಕಾಗಿ ಅವರು ಕೋಪಗೊಂಡಿದ್ದರು .

ಬಿಜೆಪಿ ಜೊತೆಗಿನ ಮೈತ್ರಿಯನ್ನು ಕಡಿತಗೊಳಿಸುವುದರ ಮೂಲಕ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ತಂದು ರಾಜ್ಯದ ಅಭಿವೃದ್ಧಿಯನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಿಂಗ್ ಶನಿವಾರ 3 ಗಂಟೆಗೆ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ನಿನ್ನೆ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...