`ಮಹಿಳಾ ವಿರೋಧಿ ಮುತಾಲಿಕ್‌ಗೆ ಬಿಜೆಪಿ ಸೇರ್ಪಡೆಗೆ ಅವಕಾಶ ನೀಡಬಾರದು ಎಂದು ಹೇಳಿದ್ದೆ' : ಮನೋಹರ ಪರೀಕರ

ಪಣಜಿ, ಬುಧವಾರ, 26 ಮಾರ್ಚ್ 2014 (10:58 IST)

PTI
"ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಮಹಿಳೆಯರ ವಿರೋಧಿ ಮತ್ತು ಹಿಂಸಾತ್ಮಕ ಚಟುವಟಿಕೆಯುಳ್ಳವರಾಗಿದ್ದು, ಅವರಿಗೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಗೆ ಅವಕಾಶ ನೀಡುವುದು ಸೂಕ್ತವಲ್ಲ ಎಂದು ಬಿಜೆಪಿ ವರಿಷ್ಠರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೆ" ಎಂದು ಗೋವಾ ಮುಖ್ಯಮಂತ್ರಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮದರೊಂದಿಗೆ ಮಾತನಾಡಿದ ಅವರು, "ಬಿಜೆಪಿ ಪಕ್ಷದಲ್ಲಿ ಮಹಿಳಾ ವಿರೋಧಿಗಳಿಗೆ ಮತ್ತು ಹಿಂಸಾತ್ಮಕ ಚಟುವಟಿಕೆ ಹೊಂದಿದವರಿಗೆ ಅವಕಾಶವಿಲ್ಲ. ಬಿಜೆಪಿಯ ಕರ್ನಾಟಕ ಘಟಕ ಮುತಾಲಿಕ್ ಸೇರ್ಪಡೆಗೆ ಸಂಬಂಧಿಸಿದಂತೆ ಸ್ಥಳೀಯ ಕೆಲವು ಕಾರಣಗಳಿಂದ ಕೆಲ ತಪ್ಪುಗಳನ್ನು ಎಸಗಿದೆ".

"ಯಾವುದೇ ಕಾರಣಕ್ಕೂ ಮಹಿಳಾ ವಿರೋಧಿಗಳಿಗೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರಿಗೆ ಬಿಜೆಪಿಗೆ ಅವಕಾಶ ನೀಡಬಾರದು ಎಂಬುದು ನನ್ನ ಭಾವನೆಯಾಗಿತ್ತು. ಇದು ಪಕ್ಷದ ವರ್ಚಸ್ಸಿಗೂ ಕುಂದು ತರುವಂತಹದ್ದು. ಈ ಹಿನ್ನೆಲೆಯಲ್ಲಿ ಪ್ರಮೋದ ಮುತಾಲಿಕ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು ಎಂದು ಬಿಜೆಪಿ ವರಿಷ್ಠರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೆ" ಎಂದು ಅವರು ಸ್ಪಷ್ಟಪಡಿಸಿದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...