ಮುಜಾಫರ್‌ನಗರ್: ಲೋಕಸಭೆ ಚುನಾವಣೆಯಲ್ಲಿ ಹಾಲಿ ಸಂಸದನಿಗೆ ಪತ್ನಿಯೇ ಎದುರಾಳಿ

ಮುಜಾಫರ್‌ನಗರ್, ಬುಧವಾರ, 19 ಮಾರ್ಚ್ 2014 (18:21 IST)

PTI
ಚುನಾವಣೆಗಳಲ್ಲಿ ವಿಶೇಷತೆಗಳಿಗೆ ಕೊರತೆಯಿರುವುದಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಂಪತಿಗಳು ಪರಸ್ಪರ ಹಣಾಹಣಿ ನಡೆಸುತ್ತಿರುವುದು ಕ್ಷೇತ್ರದ ಜನತೆಯ ಕುತೂಹಲಕ್ಕೆ ಕಾರಣವಾಗಿದೆ.

ಬಹುಜನ ಸಮಾಜ ಪಕ್ಷದ ಸಂಸತ್ ಸದಸ್ಯ ಕದೀರ್ ರಾಣಾ ಅವರ ಪತ್ನಿಯಾದ ಶಾಹೀದಾ ಬೇಗಂ ತನ್ನ ಪತಿಯ ವಿರುದ್ಧ ಮುಜಾಫರ್‌ ನಗರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದಾರೆ.

ಆಸಕ್ತಿಕರ ವಿಷಯವೆಂದರೆ, ರಾಣಾ ಮುಜಾಫರ್‌ನಗರದ ಹಾಲಿ ಸಂಸದರಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಕಳೆದ 2007ರಲ್ಲಿ ಸಮಾಜವಾದಿ ಪಕ್ಷವನ್ನು ತೊರೆದು ರಾಷ್ಟ್ರೀಯ ಲೋಕದಳ ಪಕ್ಷವನ್ನು ಸೇರಿದ್ದ ಸಂಸದ ಕದೀರ್ ರಾಣಾ, ನಂತರ 2009ರಲ್ಲಿ ಬಹುಜನ ಸಮಾಜ ಪಕ್ಷವನ್ನು ಸೇರಿದ್ದರು.

ಮುಜಾಫರ್‌ನಗರದಲ್ಲಿ ನಡೆದ ದಂಗೆ ಪ್ರಕರಣದಲ್ಲಿ ರಾಣಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ರಾಣಾ ಉದ್ರೇಕಕಾರಿ ಭಾಷಣ ನೀಡಿರುವುದು ದಂಗೆಗೆ ಕಾರಣವಾಗಿತ್ತು ಎಂದು ಆರೋಪಪಟ್ಟಿಯಲ್ಲಿ ದಾಖಲಿಸಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...