ಮೋದಿಯನ್ನು ಜೀವಮಾನವೀಡಿ ಜೈಲಿಗೆ ಕಳುಹಿಸುತ್ತೇವೆ: ಬೇನಿ ವರ್ಮಾ

ಗೋಂಡಾ, ಶುಕ್ರವಾರ, 18 ಏಪ್ರಿಲ್ 2014 (09:40 IST)

ದೇಶದ ಅಭಿವೃದ್ಧಿಗೆ ಸತತ ಮೂರನೇ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಅಗತ್ಯವಿದೆ, ತಮ್ಮ ಸರಕಾರ ಆಡಳಿತದ ಚುಕ್ಕಾಣಿ ಹಿಡಿದರೆ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ಗುಜರಾತ್ ಗಲಭೆ ಪ್ರಕರಣಕ್ಕೆಸಂಬಂಧಿಸಿದಂತೆ ಜೀವನಪೂರ್ತಿ ಜೈಲಿಗೆ ಕಳುಹಿಸಲಾಗುವುದು ಎಂದು ಕೇಂದ್ರ ಉಕ್ಕು ಮಂತ್ರಿ ಬೇನಿ ವರ್ಮಾ ಹೇಳಿದ್ದಾರೆ.

PTI

ಗೊಂಡಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡುತ್ತಿದ್ದ ಅವರು "ಪಂಜಾಬಿನಲ್ಲಿ ಪಗಡಿ, ತಮಿಳುನಾಡಿನಲ್ಲಿ ಲುಂಗಿಯನ್ನು ಉಟ್ಟುಕೊಂಡು ಜನರನ್ನು ಯಾಮಾರಿಸುವ ಪ್ರಯತ್ನ ಮಾಡುತ್ತಿರುವ ಮೋದಿ ವಾಸ್ತವವಾಗಿ ಬಹುರೂಪಿ. ಗುಜರಾತ್‌ನಲ್ಲಿ ಸಾರ್ವಜನಿಕ ಹತ್ಯಾಕಾಂಡ ಮಾಡಿರುವ ಮೋದಿಯನ್ನು ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಾರೆ ಮತ್ತು ಪ್ರಧಾನಿಯಾಗುವ ಕನಸನ್ನು ನನಸಾಗಲು ಬಿಡುವುದಿಲ್ಲ" ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರಲಿದೆ. ಆಗ ಮೋದಿಯನ್ನು ಗುಜರಾತ್ ದಂಗೆ ಕೇಸ್‌ನಲ್ಲಿ ಜೀವಮಾನ ಪೂರ್ತಿ ಜೈಲಿಗೆ ಕಳುಹಿಸುತ್ತೇವೆ ಎಂದು ವರ್ಮಾ ಹೇಳಿದರು.

ಜಾತಿವಾದ ಮತ್ತು ಕೋಮುವಾದಿ ಶಕ್ತಿಗಳು ದೇಶವನ್ನು ನಾಶಗೊಳಿಸುತ್ತವೆ. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೇರುವ ಅಗತ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ಆಯೋಗದ ಕ್ಷಮೆ ಕೋರಲಾರೆ, ಆದ್ರೆ ಅಮಿತ್ ಶಾ ನಿಷೇಧ ತೆರುವುಗೊಳಿಸಿದ್ದು ಯಾಕೆ?: ಅಜಂ ಖಾನ್

ದ್ವೇಷದ ಭಾಷಣ ಕುರಿತಂತೆ ಚುನಾವಣೆ ಆಯೋಗದ ಕ್ಷಮೆಯಾಚಿಸಲು ನಿರಾಕರಿಸಿರುವ ಯುಪಿ ಸಚಿವ ಅಜಂ ಖಾನ್, ನನ್ನ ...

ಮುರಳಿ ಮನೋಹರ್ ಜೋಷಿ ಕಾಲಿಗೆ ಬಿದ್ದು ನಮಸ್ಕರಿಸಿದ ನರೇಂದ್ರ ಮೋದಿ

ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಚಾರ ವೇದಿಕೆಯಲ್ಲಿಯೇ, ಪಕ್ಷದ ಹಿರಿಯ ನಾಯಕ ಮುರಳಿ ...