ಮೋದಿಯನ್ನು ಭೇಟಿಯಾಗಲಿರುವ ಸುಪರ್‌ಸ್ಟಾರ್ ನಾಗಾರ್ಜುನ

ನವದೆಹಲಿ, ಸೋಮವಾರ, 24 ಮಾರ್ಚ್ 2014 (15:44 IST)

ದಕ್ಷಿಣದ ಸ್ಟಾರ್ ನಾಗಾರ್ಜುನ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳ ಮಧ್ಯೆ ಇಂದು ಅವರು ಅಹಮದಾಬಾದನಲ್ಲಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ.

PTI

ಬಿಜೆಪಿಯ ಪ್ರಧಾನಿ ಅಭ್ಯರ್ಥಿಯನ್ನು ಭೇಟಿಯಾಗುತ್ತಿರುವ ದಕ್ಷಿಣದ ಎರಡನೇ ಚಲನಚಿತ್ರ ನಟ ಇವರಾಗಿದ್ದು ಈ ಮೊದಲು ನಟ ಮತ್ತು ಕೇಂದ್ರ ಸಚಿವ ಚಿರಂಜೀವಿ ಸಹೋದರ ಪವನ್ ಕಲ್ಯಾಣ್ ಮೋದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಷ್ಟ್ರೀಯ ಚುನಾವಣೆಗೆ ಕೇವಲ ಎರಡು ವಾರಗಳಿದ್ದು, ಸಾಧ್ಯವಾದಷ್ಟು ಸ್ನೇಹಿತರನ್ನು ಮತ್ತು ಮೈತ್ರಿಕೂಟಗಳನ್ನು ಸೆಳೆದುಕೊಳ್ಳುವ ಉದ್ದೇಶದಿಂದ ಬಿಜೆಪಿ ಈ ಭೇಟಿಗಳನ್ನು ನಡೆಸುತ್ತಿದೆ ಎಂದು ವೇದ್ಯವಾಗುತ್ತಿದೆ.

ನಾಗಾರ್ಜುನ ಮತ್ತು ಇಬರಿಬ್ಬರೂ ಸಹ ಆಂಧ್ರಪ್ರದೇಶದವರಾಗಿದ್ದಾರೆ.

ಮೂಲಗಳ ಪ್ರಕಾರ ನಾಗಾರ್ಜುನ ತಮ್ಮ ಪತ್ನಿ ಮಾಜಿ ನಟಿ ಅಮಲಾರವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಯಸುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಅವರು ಈ ಮೊದಲು ಅವರು ನ ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿದ್ದರು ಎಂದು ವರದಿಯಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...