ಮೋದಿಯನ್ನು ಸೋಲಿಸುವುದೇ ಗುರಿ, ಬಿಜೆಪಿ ಯಾವತ್ತೂ ಸೇರೋಲ್ಲ: ಕೇಜ್ರಿವಾಲ್

ನವದೆಹಲಿ, ಬುಧವಾರ, 2 ಏಪ್ರಿಲ್ 2014 (18:13 IST)

PR
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ಸೋಲಿಸುವುದೇ ನನ್ನ ಪ್ರಮುಖ ಗುರಿ. ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಸೇರುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಪೂರ್ವದೆಹಲಿಯ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ರಾಜಮೋಹನ್ ಸಿಂಗ್ ಪರ ಪ್ರಚಾರ ನಡೆಸಿದ ಕೇಜ್ರಿವಾಲ್, ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಒಂದು ವೇಳೆ ನನಗೆ ಸಂಸತ್ತು ಪ್ರವೇಶಿಸಬೇಕು ಎನ್ನುವ ಇಚ್ಚೆಯಿದ್ದರೆ, ಸುರಕ್ಷಿತ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯುತ್ತಿದ್ದೆ. ನನಗೆ ಮೋದಿಯನ್ನು ಸೋಲಿಸಬೇಕಾಗಿದೆ. ಆದ್ದರಿಂದ ವಾರಣಾಸಿಯಲ್ಲಿ ಸ್ಪರ್ಧಿಸುತ್ತಿದ್ದೇನೆ. ರಾಹುಲ್ ಗಾಂಧಿಯನ್ನು ಸೋಲಿಸುವುದು ಮಹತ್ವವಾಗಿದ್ದರಿಂದ ಆಮ್ ಆದ್ಮಿ ಪಕ್ಷದ ಕುಮಾರ್ ವಿಶ್ವಾಸ್ ಸ್ಪರ್ಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಾಯಕತ್ವ ಹೊಂದಿದ್ದರಿಂದ ಅವರಿಬ್ಬರನ್ನು ಸೋಲಿಸುವ ಅಗತ್ಯವಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :