ಮೋದಿ ವಿರುದ್ಧ ಕೇಜ್ರಿವಾಲ್...? ರಂಗೇರಿದ ಚುನಾವಣಾ ಕಣ!

ಬೆಂಗಳೂರು, ಸೋಮವಾರ, 17 ಮಾರ್ಚ್ 2014 (15:09 IST)

PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕೇತ್ರದಲ್ಲಿ ಸ್ಪರ್ಧಿಸಲಿದ್ದು, ಅವರ ವಿರುದ್ಧವೇ ಚುನಾವಣಾ ಕಣಕ್ಕಿಳಿಯಲು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್ ಚಿಂತಿಸುತ್ತಿದ್ದಾರೆ.

ಚುನಾವಣಾ ಪ್ರಚಾರಾರ್ಥ ಚಿಕ್ಕಬಳ್ಳಾಪುರದಲ್ಲಿ ರೋಡ್ ಶೋ ನಡೆಸಿದ ಕೇಜ್ರಿವಾಲ್ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಗುಜರಾತನಲ್ಲಿ ಯಾವ ಅಭಿವೃದ್ಧಿಯೂ ಆಗಿಲ್ಲ. ರೈತರಿಂದ ಬಲವಂತವಾಗಿ ಭೂಮಿಯನ್ನು ಕಸಿದುಕೊಂಡು ಅದಾನಿ, ಅಂಬಾನಿ ಸಮೂಹಗಳಿಗೆ ಮಾರಾಟ ಮಾಡಲಾಗಿದೆ. ಇದರಿಂದ ನಾಲ್ಕೈದು ಪ್ರಭಾವಿ ಉದ್ಯಮಿಗಳು ಉದ್ದಾರವಾಗಿದ್ದಾರೆಯೇ ಹೊರತು, ಬಡವ ಬಡವನಾಗಿಯೇ ಇದ್ದಾನೆ. ಜನಸಾಮಾನ್ಯರು ಈಗಲೂ ಸಮರ್ಪಕ ಮೂಲಭೂತ ಸೌಲಭ್ಯಗಳಿಲ್ಲದೆ ಪರದಾಡುತ್ತಿದ್ದಾರೆ" ಎಂದರು.

PTI
"ರಾಷ್ಟ್ರದ ಪ್ರಭಾವಿ ಎರಡು ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದೇಶೋದ್ಧಾರ ಎನ್ನುತ್ತಲೇ ರಾಜಕೀಯ ಮಾಡಿಕೊಂಡು ಬಂದಿದೆ. ಆದರೆ ಸಾಧನೆ ಮಾತ್ರ ಶೂನ್ಯ. ಮೋದಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಕೂಡಾ ಅಂಬಾನಿಯ ಒಂದೊಂದು ಜೇಬಿನಲ್ಲಿದ್ದಾರೆ. ಇವರಿಬ್ಬರ ಚುನಾವಣಾ ಪ್ರಚಾರದ ವೆಚ್ಚವನ್ನು ಪ್ರತಿಷ್ಠಿತ ಉದ್ಯಮಿಗಳು ವಹಿಸಿಕೊಂಡಿದ್ದಾರೆ. ಈ ಗಣ್ಯ ಉದ್ಯಮಿಗಳು ರಾಜಕೀಯ ನಾಯಕರನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡು ದೇಶವನ್ನು ಆಳುತ್ತಿದ್ದಾರೆ" ಎಂದು ಆರೋಪಿಸಿದರು.

"ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಅವರ ವಿರುದ್ಧ ಸ್ಪರ್ಧಿಸುವ ಗುರುತರ ಸವಾಲನ್ನು ಸ್ವೀಕರಿಸುತ್ತಿದ್ದೇನೆ. ಇ ಕುರಿತು ದಿನಾಂಕ 23ರಂದು ವಾರಣಾಸಿಯಲ್ಲಿ ಆಮ್ಆದ್ಮಿ ಪಕ್ಷದ ಸಭೆ ಕರೆಯಲಾಗಿದೆ. ಪಕ್ಷದ ಮುಖಂಡರ ಹಾಗೂ ಸಾರ್ವಜನಿಕರ ನಿಲುವಿನ ಮೇರೆಗೆ ಸೂಕ್ತ ತೀರ್ಮಾನ ತೆಗೆದುಕೊಂಡು ನನ್ನ ನಿರ್ಧಾರ ಪ್ರಕಟಿಸುತ್ತೇನೆ" ಎಂದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...