ಮೋದಿ ಹೆಲಿಕಾಪ್ಟರ್ ಇಳಿಯಲು ಬಿಡುವುದಿಲ್ಲ: ಕಾಸರಗೋಡು ಕಾಂಗ್ರೆಸ್ ಕಾರ್ಯಕರ್ತರು

ಕಾಸರಗೋಡು, ಸೋಮವಾರ, 7 ಏಪ್ರಿಲ್ 2014 (14:21 IST)

PTI
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಗಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬಳಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಹೆಲಿಪ್ಯಾಡ್‌ ನಾಶಪಡಿಸಿದ ಘಟನೆ ವರದಿಯಾಗಿದೆ.

ಭದ್ರತಾಪಡೆಯ ಅಧಿಕಾರಿಗಳು ಮಾಡಿದ ಮನವಿಗೆ ಕ್ಯಾರೆ ಎನ್ನುದ ಜಿಲ್ಲಾ ಕಾಂಗ್ರೆಸ್ ಸಮಿತಿ ಶನಿವಾರದಂದು ನಗರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿಯವರಿಗಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಾಶಗೊಳಿಸುವಂತೆ ಗುತ್ತಿಗೆದಾರರಿಗೆ ಆದೇಶ ನೀಡಿದೆ. ಇದೀಗ ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಹೊಸ ಹೆಲಿಪ್ಯಾಡ್ ನಿರ್ಮಿಸಲು ಬಿಜೆಪಿ ಚಿಂತನೆ ನಡೆಸಿದೆ.

ಮಂಗಳವಾರದಂದು ಬೆಳಿಗ್ಗೆ ನಗರಕ್ಕೆ ಆಗಮಿಸಲಿರುವ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಪರ ಪ್ರಚಾರ ನಡೆಸಲಿದ್ದಾರೆ.

ಕೇರಳ ಕಾಂಗ್ರೆಸ್ ಸಮಿತಿಯಿಂದ ಹಣ ವೆಚ್ಚ ಮಾಡಿ ರಾಹುಲ್ ಗಾಂಧಿಯವರಿಗಾಗಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಆದ್ದರಿಂದ ಬಿಜೆಪಿ ಪಕ್ಷದ ಬಳಕೆಗೆ ಕೊಡುವುದು ಸಾಧ್ಯವಿಲ್ಲ ಎಂದು ಕೇರಳ ಕಾಂಗ್ರೆಸ್ ಸಮಿತಿ ಸ್ಪಷ್ಟಪಡಿಸಿದೆ.ಇದರಲ್ಲಿ ಇನ್ನಷ್ಟು ಓದಿ :