ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಕಾರ್ಯದರ್ಶಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಚೆನ್ನೈ, ಸೋಮವಾರ, 27 ಜನವರಿ 2014 (16:54 IST)

PR
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕೊನೆಯ ಕಾರ್ಯದರ್ಶಿ 91 ವರ್ಷ ವಯಸ್ಸಿನ ವಿ. ಕಲ್ಯಾಣಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸೇರಿದ್ದಾರೆ.

ಜನೆವರಿ 24 ರಂದು ವಿ.ಕಲ್ಯಾಣಂ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಭ್ರಷ್ಟಾಚಾರಿಗಳು ರಾಜಕೀಯದಿಂದ ತೊಲಗಬೇಕು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವವರೆಗೆ ಆಮ್ ಆದ್ಮಿ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಕಲ್ಯಾಣಂ ತಿಳಿಸಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಇಂಡಿಯನ್ ನ್ಯಾಷನಲ್ ಆರ್ಮಿಯಲ್ಲಿ ಸೇವೆ ಸಲ್ಲಿಸಿದ್ದ ಮಾಜಿ ಸೈನಿಕ ಎಸ್.ಕೆ.ದೇವರ್ ಕೂಡಾ ಆಮ್ ಆದ್ಮಿ ತೆಕ್ಕೆಗೆ ಸೇರಿದ್ದಾರೆ.

ಗಣರಾಜ್ಯೋತ್ಸವ ದಿನದಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ದೇವರ್, ನಗರದ ರಸ್ತೆಗಳು ಶುಚಿಯಾಗಿರಬೇಕು. ಅಡಳಿತ ಭ್ರಷ್ಟಾಚಾರ ಮುಕ್ತವಾಗಿರಬೇಕು. ನಾನೇ ಹಲವು ಬಾರಿ ರಸ್ತೆ ಗುಡಿಸಿದ್ದೇನೆ ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :